ಬೆಂಗಳೂರು:ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಂಡವರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡಲಾಗಿದೆ.
ಅದರಂತೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನವೆಂಬರ್ 2 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ಪರೀಕ್ಷೆಯ ಹಾಗೂ ಅದರ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅರ್ಜಿ ಅಥವಾ ಹಿಂದಿನ ಎಂಸಿಎ (Marks Card Cum Application) ಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಕಟ್ಟಿಸಿಕೊಂಡು ಇಲಾಖಾ Online Portalನಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ತುಂಬುವಂತೆ ಆದೇಶಿಸಿದೆ.
ಸೆಪ್ಟೆಂಬರ್ 2020ರ ಫಲಿತಾಂಶದಲ್ಲಿ ಹಾಗೂ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಫಲಿತಾಂಶ ತಿರಸ್ಕರಿಸಿ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲು ಇಚ್ಛಿಸಿದ್ದಲ್ಲಿ, ಅಂತಹ ವಿದ್ಯಾರ್ಥಿಗಳು ಮೂಲ ಅಂಕಪಟ್ಟಿಗಳ (Original Marks Card) ಆಧಾರದ ಮೇಲೆ ನಿಯಮಾನುಸಾರ ಫಲಿತಾಂಶ ತಿರಸ್ಕರಣೆಗೆ ಅವಕಾಶ ನೀಡಲು ಅರ್ಜಿಯನ್ನು ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದೆ.
ವಿಶೇಷ ಸೂಚನೆ
1. 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರೆಗ್ಯೂಲರ್ ಅಥವಾ ರಿಪೀಟರ್ ಅಭ್ಯರ್ಥಿಗಳಾಗಿ ಹಾಜರಾಗುವವರು ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ನೋಂದಾಯಿಸಿದ್ದಲ್ಲಿ ಪ್ರಾಂಶುಪಾಲರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಹಾಗೂ ವಿದ್ಯಾರ್ಥಿಯ ನೋಂದಣಿಯನ್ನು ರದ್ದುಗೊಳಿಸಲಾಗುವುದು
2. ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅರ್ಹವಲ್ಲದ ಅರ್ಜಿಯನ್ನು ಇಲಾಖೆಯು ತಿರಸ್ಕರಿಸಿದಲ್ಲಿ ಪಾವತಿಸಿರುವ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ. ಇದಕ್ಕೆ ಪ್ರಾಂಶುಪಾಲರೇ ನೇರ ಜವಾಬ್ದಾರರಾಗುವರು ಮತ್ತು ಅವರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು