ಬೆಂಗಳೂರು: ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ನಗರದಲ್ಲಿ ಸದೆ ಬಡಿಯಲಾಗಿದೆ. ಹ್ಯಾಂಡ್ ಲಾಕ್ ಮುರಿದು ಕ್ಷಣ ಮಾತ್ರದಲ್ಲಿ ಬೈಕ್ ಎಗರಿಸುತ್ತಿದ್ದ ಖದೀಮರನ್ನು ಪೊಲೀಸರು ಹೆಡೆ ಮುರಿಕಟ್ಟಿದ್ದಾರೆ.
ರಾಜಧಾನಿಯ ಬ್ಯಾಟರಾಯನಪುರ, ಹಲಸೂರುಗೇಟ್ ಠಾಣಾ ವ್ಯಾಪ್ತಿಯಲ್ಲಿ ಈ ಗ್ಯಾಂಗ್ ಕಳ್ಳತನ ಮಾಡುತ್ತಿತ್ತು. ಮನೆ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸುವ ಬೈಕ್ಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು ಎನ್ನುವ ಮಾಹಿತಿ ದೊರೆತಿದೆ. ಈ ಬೈಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಾಹನ ಕಳ್ಳತನ ಮಾಡುವುದು ಹೇಗೆ ಎಂದು ಯೂಟ್ಯೂಬ್ನಲ್ಲಿ ಸರ್ಚ್ ಮಾಡಿ ಮಾಹಿತಿ ಸಂಗ್ರಹಿಸುತ್ತಿದ್ದ ಆರೋಪಿಗಳು, ಬಳಿಕ ತಮ್ಮ ಕೈಚಳಕ ತೋರಿಸುತ್ತಿದ್ದರು.