ಬೆಂಗಳೂರು: ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ರಸ್ತೆಗೆ ಬಂದ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಲಕ್ಷ್ಮೀಶ, ರಾಘವೇಂದ್ರ ಎಂಬಿಬ್ಬರು ತಮ್ಮ ಸ್ನೇಹಿತರ ಜೊತೆಗೂಡಿ ನಾಗರಭಾವಿಯ ರೆಸ್ಟೋರೆಂಟ್ಗೆ ತೆರಳಿ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿಕೊಂಡು ನಾಲ್ವರು ಎರಡು ಬೈಕಿನಲ್ಲಿ ಪ್ರತ್ಯೇಕವಾಗಿ ಬರುತ್ತಿದ್ದರು. ಬೈಕ್ ಚಾಲನೆ ವೇಳೆ ಹೆಲ್ಮೆಟ್ ಧರಿಸಿಕೊಂಡಿರಲಿಲ್ಲ.
ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜು ಬಳಿ ಬರುವಾಗ ಕುಡಿದ ಮತ್ತಿನಲ್ಲಿ ವೇಗವಾಗಿ ಬೈಕ್ ಚಲಾಯಿದ್ದಾರೆ. ಬಳಿಕ ಒಂದು ಬೈಕ್ನವರು ನಿಯಂತ್ರಣ ಕಳೆದುಕೊಂಡು ರಸ್ತೆ ಡಿವೈಡರ್ಗೆ ಗುದ್ದಿದ್ದಾರೆ.