ಬೆಂಗಳೂರು:ಸಂಜೆಯ ವೇಳೆ 8 ಹೊಸ ಕೇಸ್ಗಳು ವರದಿಯಾಗಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ ಒಟ್ಟು 34 ಜನರಿಗೆ ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 959ಕ್ಕೇರಿಕೆಯಾಗಿದೆ.
ಇಂದು ಒಂದೇ ದಿನ ರಾಜ್ಯದಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಕಲಬುರಗಿಯ 60 ವರ್ಷದ ವ್ಯಕ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈವರೆಗೆ ರಾಜ್ಯದಲ್ಲಿ 33 ಜನ ಮೃತಪಟ್ಟಿದ್ದಾರೆ.