ಕರ್ನಾಟಕ

karnataka

ETV Bharat / city

34,900 ಮನೆಗಳು ಫಲಾನುಭವಿಗಳಿಗೆ ಹಸ್ತಾಂತರ: ವಸತಿ ಸಚಿವ ಸೋಮಣ್ಣ

34,900 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಿದ್ದೇವೆ ಹಾಗೂ 188 ವಿಧಾನಸಭಾ ಕ್ಷೇತ್ರಗಳಲ್ಲಿ 97,134 ಮನೆಗಳ ನಿರ್ಮಾಣಕ್ಕೆ ಇದೇ ತಿಂಗಳ 16 ಒಳಗೆ ಕೆಲಸ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

By

Published : Sep 4, 2020, 3:33 PM IST

Minister Somanna
34,900 ಮನೆಗಳು ಫಲಾನುಭವಿಗಳಿಗೆ ಹಸ್ತಾಂತರ

ಬೆಂಗಳೂರು: ಕೇಂದ್ರ ಸರ್ಕಾರ 1.80 ಲಕ್ಷ ಮನೆಗಳನ್ನು ರಾಜ್ಯಕ್ಕೆ‌ ನೀಡಿ ನಾಲ್ಕು ವರ್ಷ ಆಗಿದೆ. ಈಗ 34,900 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಿದ್ದೇವೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ನಂತರ ಮಾತನಾಡಿದ ಅವರು, 188 ವಿಧಾನಸಭಾ ಕ್ಷೇತ್ರಗಳಲ್ಲಿ 97,134 ಮನೆಗಳ ನಿರ್ಮಾಣ ಕಾಮಗಾರಿಯನ್ನು ಸೆ. 16 ಒಳಗೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.

ಫಲಾನುಭವಿಗಳಿಗೆ ಮನೆಗಳ ಹಸ್ತಾಂತರ ಕುರಿತು ವಸತಿ ಸಚಿವ ವಿ. ಸೋಮಣ್ಣ ಮಾಹಿತಿ

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ 1.56 ಲಕ್ಷ ಮನೆಗಳನ್ನು ನೀಡಲು ತೀರ್ಮಾನಿಸಲಾಗಿದೆ. ಗ್ರಾಮೀಣ ಭಾಗದ ಬಡ ಜನತೆಗಾಗಿ ಒಂದು ಗ್ರಾಮ ಪಂಚಾಯತ್​ ಗೆ ತಲಾ 20 ಮನೆಗಳನ್ನು ನೀಡಲು ನಿರ್ಧರಿಸಲಾಗಿದೆ. 1700 ಕ್ಕೂ ಹೆಚ್ಚು ಕೊಳೆಗೇರಿಗಳಲ್ಲಿ 3.12 ಲಕ್ಷ ಮನೆಗಳನ್ನು ಸಕ್ರಮಗೊಳಿಸಲಾಗುತ್ತಿದೆ‌. 7,000 ಎಕರೆಯಲ್ಲಿ ಮೂಲಭೂತ ಸೌಕರ್ಯ ನೀಡಲು ಕ್ರಮ ಕೈಗೊಳ್ಳಲಿದ್ದು, 3.16 ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.

ಸಾಲ ಮಾಡಬೇಕೆಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ, ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ. ಅವರು ಎಲ್ಲವನ್ನೂ ನಿಭಾಯಿಸುತ್ತಾರೆ. ವಸತಿ ಇಲಾಖೆಗೆ ಹಣದ ಕೊರತೆ ಇಲ್ಲವೆಂದು ಸ್ಪಷ್ಟಪಡಿಸಿದರು.

ABOUT THE AUTHOR

...view details