ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿಂದು 386 ಮಂದಿಗೆ ಕೊರೊನಾ ದೃಢ: 5 ಸೋಂಕಿತರು ಬಲಿ - 386 people infected in the state

ರಾಜ್ಯದಲ್ಲಿ ಇಂದು 291 ಮಂದಿ ಗುಣಮುಖರಾಗಿದ್ದು, ಈವರೆಗೆ 9,29,058 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5,882 ಇದ್ದು, 125 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಸೋಂಕಿತರ ಪ್ರಕರಣಗಳ ಶೇಕಡಾವಾರು 0.62ರಷ್ಟು ಇದ್ದರೆ, ಮೃತಪಟ್ಟವರ ಪ್ರಮಾಣ ಶೇ. 1.29ರಷ್ಟು ಇದೆ.

ಕೋವಿಡ್
ಕೋವಿಡ್

By

Published : Feb 19, 2021, 9:29 PM IST

ಬೆಂಗಳೂರು:ರಾಜ್ಯದಲ್ಲಿಂದು 386 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,47,246ಕ್ಕೆ ಏರಿಕೆ ಆಗಿದೆ. 5 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12,287ಕ್ಕೆ ಏರಿದೆ.‌

ರಾಜ್ಯದಲ್ಲಿ ಇಂದು 291 ಮಂದಿ ಗುಣಮುಖರಾಗಿದ್ದು, ಈವರೆಗೆ 9,29,058 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5,882 ಇದ್ದು, 125 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ಸೋಂಕಿತರ ಪ್ರಕರಣಗಳ ಶೇಕಡಾವಾರು 0.62ರಷ್ಟು ಇದ್ದರೆ, ಮೃತಪಟ್ಟವರ ಪ್ರಮಾಣ ಶೇ. 1.29ರಷ್ಟು ಇದೆ. ಯುಕೆಯಿಂದ 300 ಪ್ರಯಾಣಿಕರು ಬಂದಿದ್ದು, ಈವರೆಗೆ 63 ಜನಕ್ಕೆ ಪಾಸಿಟಿವ್ ಬಂದಿದೆ. ಈ ಸೋಂಕಿತರ ಸಂಪರ್ಕದಲ್ಲಿದ್ದ 26 ಮಂದಿಗೂ ಪಾಸಿಟಿವ್ ದೃಢಪಟ್ಟಿದೆ.‌ 25 ಜನರಿಗೆ ರೂಪಾಂತರ ಕೊರೊನಾ ಹರಡಿದೆ.

ರಾಜಧಾನಿ ಬೆಂಗಳೂರಿನ ಕೋವಿಡ್​ ವಿವರ:ಬೆಂಗಳೂರಿನಲ್ಲಿಂದು 209 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4,03,236ಕ್ಕೆ ಏರಿಕೆ ಆಗಿದೆ. 111 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 3,94,583 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 4,207 ಸಕ್ರಿಯ ಪ್ರಕರಣಗಳು ಇದ್ದು, ಇಂದು 4 ಸೋಂಕಿತರು ಕೊರೊನಾದಿಂದ ಮೃತರಾಗಿದ್ದಾರೆ.‌ ಈವರೆಗೆ 4,445 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ABOUT THE AUTHOR

...view details