ಬೆಂಗಳೂರು:ಕಮಿಷನ್ ಕುರಿತಾಗಿ ರಾಜ್ಯಪಾಲರಿಗೆ ಹಾಗೂ ಪ್ರಧಾನಿ ಮೋದಿ ಅವರಿಗೆ ದೂರು ಕೊಡಲಾಗಿತ್ತು. ಈ ವಿಷಯದ ಮೇಲೆ ಚರ್ಚೆ ಅವಕಾಶ ನೀಡುವಂತೆ ಪ್ರತಿಪಕ್ಷದವರಾಗಿ ಬೆಳಗಾವಿ ಅಧಿವೇಶನದಲ್ಲಿ ಕೇಳಿದ್ದೆವು. ಆಗ ನಮಗೆ ಅವಕಾಶ ಮಾಡಿ ಕೊಡಲಿಲ್ಲ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ನಿಲುವಳಿ ಸೂಚನೆ ನೀಡಿದ್ದರೂ ಅವಕಾಶ ಕೊಟ್ಟಿರಲಿಲ್ಲ. ನಿಯಮ 69ರಲ್ಲಿ ಚರ್ಚೆಗೆ ತೆಗೆದುಕೊಳ್ಳಲು ಅವಕಾಶ ಮಾಡಿ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ವಿಧಾನಸೌಧದಲ್ಲಿ ಅಸಮಾಧಾನ ಹೊರಹಾಕಿದರು.
40% ಕಮಿಷನ್ ವಿಷಯದ ಚರ್ಚೆಗೆ ರಾಜ್ಯ ಸರ್ಕಾರ ಹೆದರುತ್ತಿದೆ: ಅಜಯ್ ಸಿಂಗ್
40% ಕಮಿಷನ್ ಬಗ್ಗೆ ವಿಧಾನ ಸೌಧದಲ್ಲಿ ಚರ್ಚೆಗೆ ತೆಗೆದುಕೊಳ್ಳಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ದೂರಿದರು.
40% ಕಮಿಷನ್ ವಿಷಯದ ಚರ್ಚೆಗೆ ರಾಜ್ಯ ಸರ್ಕಾರ ಹೆದರುತ್ತಿದೆ
ಶೇ. 40 ಕಮೀಷನ್ ಆರೋಪಕ್ಕೆ ಸಂಬಂಧಿಸಿದಂತೆ ಅದರ ಮೇಲೆ ಚರ್ಚೆಗೆ ಸರ್ಕಾರ ಮುಂದಾಗುತ್ತಿಲ್ಲ. ಭ್ರಷ್ಟಾಚಾರದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ. ಸಚಿವರೊಬ್ಬರ ಮೇಲೆ ಕೂಡ ಆರೋಪ ಕೇಳಿಬಂದಿದೆ. ಇದರ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಡುತ್ತಿಲ್ಲ. ಪಾದಯಾತ್ರೆ ಮೂಲಕ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು ಅಂತ ಒತ್ತಾಯಿಸಿದ್ದೆವು. ಇದರ ಬಗ್ಗೆ ಸುದೀರ್ಘವಾದ ಚರ್ಚೆ ಆಗಬೇಕು ಅವರು ಒತ್ತಾಯಿಸಿದರು.
ಇದನ್ನೂ ಓದಿ:ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಆರೋಪ.. ಮಾಜಿ ಸಿಎಂ ಬಿಎಸ್ವೈ ವಿರುದ್ಧ ಎಸಿಬಿಗೆ ದೂರು