ಬೆಂಗಳೂರು:ರಾಜ್ಯದಲ್ಲಿಂದು 419 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 9,44,856ಕ್ಕೆ ಏರಿಕೆ ಆಗಿದೆ.
ಇಂದು 4 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12,263ಕ್ಕೆ ಏರಿದೆ. 430 ಮಂದಿ ಗುಣಮುಖರಾಗಿದ್ದು, ಈವರೆಗೆ 9,26,664 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಸದ್ಯ, 5,910 ಸಕ್ರಿಯ ಪ್ರಕರಣಗಳಿದ್ದು, 135 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿತರ ಪ್ರಕರಣಗಳ ಶೇಕಡವಾರು 0.63ರಷ್ಟು ಇದ್ದರೆ, ಮೃತ ಪಟ್ಟವರ ಪ್ರಮಾಣ ಶೇ 0.95ರಷ್ಟಿದೆ. ಈವರೆಗೆ ಯುಕೆಯಿಂದ ಬಂದಿರುವ 60 ಜನಕ್ಕೆ ಪಾಸಿಟಿವ್ ಬಂದಿದ್ದು, ಈ ಸೋಂಕಿತರ ಸಂಪರ್ಕದಲ್ಲಿದ್ದ 26 ಮಂದಿಗೂ ಸೋಂಕು ದೃಢಪಟ್ಟಿದೆ. 25 ಜನರಿಗೆ ರೂಪಾಂತರ ಕೊರೊನಾ ಹರಡಿದೆ.
ಬೆಂಗಳೂರಿನಲ್ಲಿಂದು 258 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4,01,775ಕ್ಕೆ ಏರಿಕೆ ಆಗಿದೆ. 224 ಸೋಂಕಿತರು ಗುಣಮುಖರಾಗಿದ್ದು, 3,93,390 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 3,957 ಸಕ್ರಿಯ ಪ್ರಕರಣಗಳಿದ್ದು, 3 ಸೋಂಕಿತರು ಕೊರೊನಾದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ 4,427 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.