ಬೆಂಗಳೂರು:ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಮೈಸೂರಿನ ಬೆಟಾಲಿಯನ್ 179 ಕೆಎಸ್ಆರ್ಪಿಯ 42 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕೊರೊನಾ ಸೋಂಕು ಕಾಣಿಸಿಕೊಂಡ 42 ಕೆಎಸ್ಆರ್ಪಿ ಪೊಲೀಸರಲ್ಲಿ ಸೋಂಕು ಸೌಮ್ಯ ಸ್ವಭಾವದ್ದಾಗಿದೆ. ಎಲ್ಲಾ ಸಿಬ್ಬಂದಿ ಹೋಮ್ ಕ್ವಾರಂಟೈನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಪೊಲೀಸ್ ಮೀಸಲು ಪಡೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಕಾನಕ್ಕಾಗಿ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟಿನಿಂದ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಅಹಿತಕರ ಘಟನೆ ನಡೆಯದಂತೆ ಮೈಸೂರು ವಿಭಾಗದ 179 ಮಂದಿ ಕೆಎಸ್ಆರ್ಪಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.