ಸಂತೋಷ್ ಆತ್ಮಹತ್ಯೆ ಯತ್ನ ಕೇಸ್: ತನಿಖೆ ನಡೆಸುತ್ತಿದ್ದ ಇನ್ಸ್ಪೆಕ್ಟರ್ ಸೇರಿ 43 ಇನ್ಸ್ಪೆಕ್ಟರ್ಗಳ ವರ್ಗ - CM's secretary NR Santhosh
14:45 December 04
ಸರ್ಕಾರದ ವರ್ಗಾವಣೆ ಆದೇಶ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ತನಿಖೆ ನಡೆಸುತ್ತಿದ್ದ ಇನ್ಸ್ಪೆಕ್ಟರ್ ಮಂಜುನಾಥ್ ಸೇರಿದಂತೆ 43 ಪೊಲೀಸ್ ಇನ್ಸ್ಪೆಕ್ಟರ್ಸ್ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಇನ್ಸ್ಪೆಕ್ಟರ್ಸ್ ವರ್ಗಾವಣೆ ಮಾಡಲಾಗಿದೆ. ಸದಾಶಿವನಗರ ಠಾಣೆಯಲ್ಲಿ ದಾಖಲಾಗಿದ್ದ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ ತನಿಖೆ ನಡೆಸುತ್ತಿರುವ ಇನ್ಸ್ಪೆಕ್ಟರ್ ಮಂಜುನಾಥ್ ಅವರನ್ನು ಸಿಟಿ ಕಂಟ್ರೋಲ್ ರೂಂಗೆ ವರ್ಗಾವಣೆಗೊಳಿಸಲಾಗಿದೆ.
ಕೆ.ಜಿ.ಹಳ್ಳಿ ಇನ್ಸ್ಪೆಕ್ಟರ್ ಅಜಯ್ ಸಾರಥಿ ಸಿಐಡಿಗೆ ಸ್ಥಳಾಂತರಿಸಲಾಗಿದೆ. ವರ್ಗಾವಣೆಗೊಂಡ ಇನ್ಸ್ಪೆಕ್ಟರ್ಗಳು ಕೂಡಲೇ ಸ್ಥಳ ನಿಯುಕ್ತಿಗೊಂಡ ಬಳಿಕ ಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಐಜಿಪಿ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.