ಕರ್ನಾಟಕ

karnataka

ETV Bharat / city

ಉಕ್ರೇನ್​ನಿಂದ ಒಟ್ಟು 45 ವಿದ್ಯಾರ್ಥಿಗಳು ರಾಜ್ಯಕ್ಕೆ ವಾಪಸ್.. ಉಳಿದವರ ಕರೆತರಲು ಯತ್ನ: ಕೆಎಸ್‍ಡಿಎಂಎ

Russia Ukraine war crisis.. ಯುದ್ಧಪೀಡಿತ ಉಕ್ರೇನ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಸೋಮವಾರ ರಾತ್ರಿ ಹಾಗೂ ಇಂದು ಬೆಳಗ್ಗೆ 8 ಮಂದಿ ವಿದ್ಯಾರ್ಥಿಗಳು ಭಾರತಕ್ಕೆ ವಾಪಸಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 45 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದಂತಾಗಿದೆ.

students-return
ರಾಜ್ಯಕ್ಕೆ ವಾಪಸ್

By

Published : Mar 1, 2022, 3:10 PM IST

ಬೆಂಗಳೂರು:ಯುದ್ಧಪೀಡಿತ ಉಕ್ರೇನ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ 8 ಮಂದಿ ವಿದ್ಯಾರ್ಥಿಗಳು ಭಾರತಕ್ಕೆ ವಾಪಸಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 45 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದಂತಾಗಿದೆ.

ಮೊದಲ ದಿನ ಮುಂಬೈ ಮೂಲಕ 12 ಮಂದಿ ವಿದ್ಯಾರ್ಥಿಗಳು ವಾಪಸಾಗಿದ್ದರು. ಉಳಿದವರು ದೆಹಲಿ ಮೂಲಕ ಬೆಂಗಳೂರಿಗೆ ಮರಳಿದ್ದಾರೆ ಎಂದು ಕೆಎಸ್‍ಡಿಎಂಎ ಆಯುಕ್ತ ಹಾಗೂ ನೋಡಲ್ ಅಧಿಕಾರಿ ಮನೋಜ್ ರಾಜನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ನೆರವಿನೊಂದಿಗೆ ಈತನಕ 45 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅಲ್ಲಿನ ರಾಯಭಾರಿ ಕಚೇರಿಗಳೊಂದಿಗೆ ಸಂಪರ್ಕದಲ್ಲಿದ್ದು, ಉಳಿದ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಉಕ್ರೇನ್​ನಲ್ಲಿ ಒಟ್ಟು 451 ಮಂದಿ ಸಿಲುಕಿಕೊಂಡಿದ್ದರು. ಅವರನ್ನು ಕರೆತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ಆಪರೇಷನ್ ಗಂಗಾ ಅಡಿಯಲ್ಲಿ ಸುರಕ್ಷಿತವಾಗಿ ವಿಮಾನದ ಮೂಲಕ ಕರೆತರುವ ಕೆಲಸ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಓದಿ:ರಣೋತ್ಸಾಹದಿಂದ ಮುನ್ನುಗ್ತಿದೆ ರಷ್ಯಾ ಸೇನೆ: ಕೀವ್​​ನಿಂದ ತಕ್ಷಣ ಹೊರಡುವಂತೆ ತನ್ನ ಪ್ರಜೆಗಳಿಗೆ ಭಾರತದ ತುರ್ತು ಸೂಚನೆ

For All Latest Updates

TAGGED:

ABOUT THE AUTHOR

...view details