ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ರೂಪಾಯಿ ಚೆಕ್ ಅನ್ನು ಹಸ್ತಾಂತರ ಮಾಡಲಾಯಿತು.
ಖನಿಜ ನಿಗಮದಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ದೇಣಿಗೆ - Bengaluru
ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ರೂ. ದೇಣಿಗೆ ನೀಡಲಾಗಿದೆ.
ಪರಿಹಾರ ನಿಧಿಗೆ 5 ಕೋಟಿ
ಸಿಎಂ ಅಧಿಕೃತ ನಿವಾಸ ಕಾವೇರಿಗೆ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ ಭೇಟಿ ನೀಡಿದ್ದರು. ಈ ವೇಳೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ನಿಗಮದ ವತಿಯಿಂದ 5 ಕೋಟಿ ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ, ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಕಪಸಿ, ಜಿಎಂ ನಿಶ್ಚಿತ, ಮಲ್ಲಿಕಾರ್ಜುನ, ರಾಜಶೇಖರ್, ಚೋರ್ಗಿ ಉಪಸ್ಥಿತರಿದ್ದರು.