ಬೆಂಗಳೂರು: ಮಾದಕ ವಸ್ತು ಮಾರಾಟ ಜಾಲದ ಮೇಲೆ ದಾಳಿ ನಡೆಸಿದ ಸಿಸಿಬಿ ತಂಡ ಒಬ್ಬ ವಿದೇಶಿ ಪ್ರಜೆ ಮತ್ತು ಇಬ್ಬರು ಅಂತಾರಾಜ್ಯ ಡ್ರಗ್ ಪೆಡ್ಲರ್‌ಗಳು ಸೇರಿದಂತೆ ಒಟ್ಟು 06 ಜನರನ್ನು ಬಂಧಿಸಿದೆ.
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿ ಬಂಧನ - ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿ ಬಂಧನ
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಎರಡು ಕಡೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳ ತಂಡ ಒಟ್ಟು 06 ಜನರನ್ನು ಬಂಧಿಸಿ, ಸುಮಾರು 15 ಲಕ್ಷ ರೂ. ಬೆಲೆ ಬಾಳುವ 28 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎರಡು ಕಡೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಆಂತೋನಿ, ಮಹೇಶ, ಅಂಬುಲಸಾಯಿ, ವಿಜಯ್, ಕವನ್ ಮತ್ತು ಪ್ರಸಾದ್ ರನ್ನು ಬಂಧಿಸಿ, ಅವರಿಂದ ಸುಮಾರು 15 ಲಕ್ಷ ರೂ. ಬೆಲೆ ಬಾಳುವ 28 ಕೆ.ಜಿ ಗಾಂಜಾ, 08 ಮೊಬೈಲ್ ಫೋನ್‌ಗಳು, ನಗದು ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.
ಈ ಕುರಿತು ಹೆಚ್.ಎ.ಎಲ್ ಪೊಲೀಸ್ ಠಾಣೆ ಹಾಗೂ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ವಿಶಾಖಪಟ್ಟಣದ ಅರಕ್‌ವೇಲಿಯಿಂದ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ, ಬೆಂಗಳೂರಿಗೆ ತಂದು ಇಲ್ಲಿನ ಡ್ರಗ್ಸ್ ಪೆಡ್ಲರ್‌ಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ದುಡಿಯುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರು ತಲೆಮರೆಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.