ಬೆಂಗಳೂರು:ಯುಪಿಎಸ್‍ಸಿ ಪರೀಕ್ಷೆಯಲ್ಲಿ 646ನೇ ಸ್ಥಾನ ಪಡೆದು ಕ್ರೈಸ್ (KREIS Bangalore) ಹಾಗೂ ರಾಜ್ಯಕ್ಕೆ ಕೀರ್ತಿ ತಂದಿರುವ ಕರ್ನಾಟಕ ವಸತಿ ಶಿಕ್ಷಣ ಸಂಘದ ವಸತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ರಮೇಶ್ ಗುಮಗೇರಿ ಅವರನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಶ್ಲಾಘಿಸಿ, ಅಭಿನಂದಿಸಿದ್ದಾರೆ.
ರಮೇಶ್ ಜೊತೆ ವಿಡಿಯೋ ಸಂವಾದ ನಡೆಸಿದ ಉಪಮುಖ್ಯಮಂತ್ರಿ, ಅಧ್ಯಯನ, ಪೂರ್ವ ತಯಾರಿ ಕುರಿತು ಚರ್ಚಿಸಿ, ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿದರು. ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿ, ವಿಶೇಷ ಅತಿಥಿ ಉಪನ್ಯಾಸಕರಾಗಿ ಆಗಾಗ ವಸತಿ ಶಾಲೆಗಳಿಗೆ ಭೇಟಿ ನೀಡಿ, ಎಲ್ಲಾ ವಿದ್ಯಾರ್ಥಿಗಳಲ್ಲಿ ಅಖಿಲ ಭಾರತ ಸೇವೆ ಕನಸನ್ನು ಮೂಡಿಸಿ, ಪೂರ್ವ ಸಿದ್ದತೆ ಕೈಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.