ಬೆಂಗಳೂರು: ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಪ್ರತೀ ತಿಂಗಳು 7 ಲಕ್ಷ ಖರ್ಚು ಮಾಡುತ್ತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡಲಾಗ್ತಿದೆ ಎಂದು ಪಾಲಿಕೆ ಆಯುಕ್ತರ ಸಾರ್ವಜನಿಕರು ಗುಡುಗಿದ್ದಾರೆ.
ಟ್ವಿಟರ್, ಫೇಸ್ಬುಕ್ನಲ್ಲಿ ಪಾಲಿಕೆ ಅಭಿವೃದ್ಧಿ ಕೆಲಸಗಳನ್ನು ಪ್ರಚಾರ ಮಾಡುತ್ತಿದೆ. ಪಾಲಿಕೆ ಆಯುಕ್ತ ಬಿ.ಹೆಚ್.ಅನಿಲ್ಕುಮಾರ್ ಅಧೀನದ ಟ್ವಿಟರ್ ಹಾಗೂ ಫೇಸ್ಬುಕ್ ಪೇಜ್ಗಳಲ್ಲಿ ಬಿಬಿಎಂಪಿ ಕೈಗೊಳ್ಳುವ ಅಭಿವೃದ್ಧಿ ಕೆಲಸಗಳನ್ನು ಪ್ರಚಾರ ಮಾಡಲು ಬಿಬಿಎಂಪಿ 7 ಲಕ್ಷ ರೂ ವೆಚ್ಚ ಮಾಡುತ್ತಿದೆ.