ಬೆಂಗಳೂರು:ಡಾ.ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ರಾಜ್ಯ ವಿದ್ಯಾರ್ಥಿಗಳ ಕೋಟಾದಡಿ ಶೇ.8 ರಷ್ಟು ಸೀಟುಗಳನ್ನು ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಪರವಾಗಿ ಶಾಸಕ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಅನುಚ್ಛೇದ 371(ಜೆ) ಅನ್ವಯ ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಮೀಸಲಾತಿ ಒದಗಿಸಿ ಕೊಡಲಾಗುತ್ತಿದೆ ಎಂದರು.
ಅಂಬೇಡ್ಕರ್ ಅರ್ಥಶಾಸ್ತ್ರ ವಿವಿ: ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.8 ರಷ್ಟು ಸೀಟು ಮೀಸಲು - ambedkar school of economics university
ಡಾ.ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಮೀಸಲಿರುವ ರಾಜ್ಯ ವಿದ್ಯಾರ್ಥಿಗಳ ಕೋಟಾದಡಿ ಶೇ.8 ರಷ್ಟು ಸೀಟುಗಳನ್ನು ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಮೀಸಲಿಡಲಾಗುತ್ತದೆ- ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
![ಅಂಬೇಡ್ಕರ್ ಅರ್ಥಶಾಸ್ತ್ರ ವಿವಿ: ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.8 ರಷ್ಟು ಸೀಟು ಮೀಸಲು 8-percent-reservation-for-kalyana-karnataka-students-says-minister-ashwath-narayana](https://etvbharatimages.akamaized.net/etvbharat/prod-images/768-512-14825616-thumbnail-3x2-yy.jpg)
2020-21ನೇ ಸಾಲಿನಿಂದ 2 ವರ್ಷಗಳ ಎಂಎಸ್‍ಸಿ ಎಕನಾಮಿಕ್ಸ್ ಕೋರ್ಸ್ ಪ್ರಾರಂಭಿಸಲಾಗಿದೆ. ಈ ವಿಶ್ವವಿದ್ಯಾಲಯವನ್ನು ಏಕಾತ್ಮಕ ಸ್ವರೂಪದ ಸಾರ್ವಜನಿಕರ ವಿಶ್ವವಿದ್ಯಾಲಯವಾಗಿ ಉನ್ನತೀಕರಿಸಲಾಗಿದೆ. ಇದು ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೈಪಿಡಿಯಲ್ಲಿ ಮಾಹಿತಿ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 5 ವರ್ಷದ ಇಂಟಿಗ್ರೇಟೆಡ್ ಎಕನಾಮಿಕ್ಸ್ ಕೋರ್ಸ್ ನಲ್ಲಿ 60 ಸೀಟುಗಳಿದ್ದು, 4 ಸೀಟುಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಿಡಲಾಗಿದೆ. 2 ವರ್ಷದ ಕೋರ್ಸ್‍ನ 20 ಸೀಟುಗಳಲ್ಲಿ ಒಂದು ಸೀಟ್ ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಇದನ್ನೂ ಓದಿ:ಮೇಕೆದಾಟು ಯೋಜನೆ.. ತಮಿಳುನಾಡು ನಿರ್ಣಯ ಖಂಡಿಸಿ ಸದನದಲ್ಲಿ ಸರ್ವಾನುಮತದ ನಿರ್ಣಯ