ಕರ್ನಾಟಕ

karnataka

ETV Bharat / city

ಉಕ್ರೇನ್​ನಲ್ಲಿ ಕರ್ನಾಟಕದ 281 ಎಂಬಿಬಿಎಸ್‌ ವಿದ್ಯಾರ್ಥಿಗಳು: ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ರವಾನೆ - ವ್ಲಾಡಿಮಿರ್ ಪುಟಿನ್

ಯುದ್ಧಪೀಡಿತ ಉಕ್ರೇನ್​ನಲ್ಲಿ ಕರ್ನಾಟಕದ 281 ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅವರನ್ನು ಸುರಕ್ಷಿತವಾಗಿ ಕರುನಾಡಿಗೆ ಕರೆತರಲು ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಕ್ರೇನ್​ನಲ್ಲಿ ಕರ್ನಾಟಕದ 281 ಎಂಬಿಬಿಎಸ್‌ ವಿದ್ಯಾರ್ಥಿಗಳು
ಉಕ್ರೇನ್​ನಲ್ಲಿ ಕರ್ನಾಟಕದ 281 ಎಂಬಿಬಿಎಸ್‌ ವಿದ್ಯಾರ್ಥಿಗಳು

By

Published : Feb 25, 2022, 11:32 AM IST

Updated : Feb 25, 2022, 12:04 PM IST

ಬೆಂಗಳೂರು: ಯುದ್ಧಪೀಡಿತ ಉಕ್ರೇನ್​​ನಲ್ಲಿ ರಾಜ್ಯದ 281 ವಿದ್ಯಾರ್ಥಿಗಳು ಸಿಲುಕಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಹಾಯವಾಣಿಗೆ ಕರೆಗಳು ಬಂದಿವೆ. ಇಂದು ಬೆಳಗ್ಗೆ 10 ಗಂಟೆವರೆಗೆ ಬಂದ ಕರೆಯ ಆಧಾರದಲ್ಲಿ ರಾಜ್ಯದ ಜಿಲ್ಲಾವಾರು ವಿದ್ಯಾರ್ಥಿಗಳು ಉಕ್ರೇನ್​ನಲ್ಲಿ ಸಿಲುಕಿಕೊಂಡಿರುವ ಬಗ್ಗೆ ಪ್ರಾಧಿಕಾರ ಮಾಹಿತಿ ನೀಡಿದೆ.

ಸಹಾಯವಾಣಿಯಿಂದ ಸಂಗ್ರಹಿಸಿದ ಈ ಮಾಹಿತಿಯನ್ನು ವಿದೇಶಾಂಗ ಸಚಿವಾಲಯ ಹಾಗೂ ಉಕ್ರೇನ್ ರಾಜಧಾನಿ ಕಿವ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ರವಾನಿಸಲಾಗಿದೆ. ವಿದ್ಯಾರ್ಥಿಗಳ ರಕ್ಷಣೆ ಹಾಗೂ ಸುರಕ್ಷಿತವಾಗಿ ತವರಿಗೆ ಕರೆ ತರುವ ನಿಟ್ಟಿನಲ್ಲಿ ಸಚಿವಾಲಯದ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳು ಸದ್ಯ ಸುರಕ್ಷಿತವಾಗಿದ್ದು, ಯಾವುದೇ ಆತಂಕಪಡುವ ಅಗತ್ಯ ಇಲ್ಲ. ಆದಷ್ಟು ಬೇಗ ಸುರಕ್ಷಿತವಾಗಿ ತಮ್ಮನ್ನು ರಾಜ್ಯಕ್ಕೆ ಕರೆತರಲಾಗುವುದು ಎಂದು ವಿದ್ಯಾರ್ಥಿಗಳಿಗೆ ಅಭಯ ನೀಡಲಾಗಿದೆ‌. ಕೀವ್ ಭಾರತೀಯ ದೂತಾವಾಸ ಅಧಿಕಾರಿಗಳ ಜೊತೆ ಸಂಪರ್ಕ ಸಾಧಿಸಲಾಗಿದ್ದು, ರಾಜ್ಯದ ವಿದ್ಯಾರ್ಥಿಗಳನ್ನು ತವರಿಗೆ ಕರೆ ತರುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಉಕ್ರೇನ್​ ರಾಜಧಾನಿ ಕೀವ್ ಮೇಲೆ ರಷ್ಯಾ ಪಡೆಗಳಿಂದ ಬಾಂಬ್ ದಾಳಿ

ಈಗಾಗಲೇ ಯುದ್ಧಪೀಡಿತ ಉಕ್ರೇನ್​​ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸಿ, ವಾಪಸು ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಐಎಫ್ಎಸ್ ಅಧಿಕಾರಿ ಮನೋಜ್ ರಾಜನ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ. ನೋಡಲ್ ಅಧಿಕಾರಿ ವಿದೇಶಾಂಗ ಸಚಿವಾಲಯ ಹಾಗೂ ಉಕ್ರೇನ್ ಕಿವ್​​ನಲ್ಲಿನ ಭಾರತೀಯ ದೂತವಾಸದ ಜೊತೆ ಸಮನ್ವಯ ಸಾಧಿಸಿ, ಸಿಲುಕಿಕೊಂಡಿರುವ ರಾಜ್ಯದ ಜನರನ್ನು ವಾಪಸು ಕರೆತರುವ ಕೆಲಸ ಮಾಡುತ್ತಿದ್ದಾರೆ. ಇತ್ತ ಸಿಎಂ ಕಚೇರಿ ಹಾಗೂ ಮುಖ್ಯ ಕಾರ್ಯದರ್ಶಿಯವರು ವಿದೇಶಾಂಗ ಸಚಿವಾಲಯ ಹಾಗೂ ಭಾರತೀಯ ಕಿವ್ ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

24/7 ಹೆಲ್ಪ್ ಲೈನ್ ಸಂಖ್ಯೆ: 080-1070, 080-22340676
ಇ-ಮೇಲ್ ಐಡಿ: manoarya@gmail.com, revenuedmkar@gmail.com ಮೂಲಕ ಸಂಪರ್ಕಿಸಬಹುದಾಗಿದೆ.

ಉಕ್ರೇನ್​ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ಜಿಲ್ಲಾವಾರು ವಿವರ:

ಉಕ್ರೇನ್​ನಲ್ಲಿ ಕರ್ನಾಟಕದ 281 ಎಂಬಿಬಿಎಸ್‌ ವಿದ್ಯಾರ್ಥಿಗಳು
Last Updated : Feb 25, 2022, 12:04 PM IST

ABOUT THE AUTHOR

...view details