ಬೆಂಗಳೂರು: ರಾಜ್ಯದಲ್ಲಿಂದು 9,746 ಮಂದಿ ಸೋಂಕಿತರು ಪತ್ತೆಯಾಗಿದ್ದು, 9,102 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಇದೀಗ 3,89,232 ಕ್ಕೆ ಏರಿದೆ.
ರಾಜ್ಯದಲ್ಲಿ ಒಟ್ಟು 2,83,298 ಮಂದಿ ಗುಣಮುಖರಾಗಿ ಡಿಸ್ಜಾರ್ಜ್ ಆಗಿದ್ದಾರೆ. ಇತ್ತ ಸಾವಿನ ಸಂಖ್ಯೆ ನೂರರ ಗಡಿದಾಟಿದ್ದು, 128 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 6,298ಕ್ಕೆ ಏರಿಕೆಯಾಗಿದೆ. 19 ಮಂದಿ ಅನ್ಯ ಕಾರಣಕ್ಕೆ ಮೃತರಾಗಿದ್ದು, ಸದ್ಯ ರಾಜ್ಯದಲ್ಲಿ 99,617 ಸಕ್ರಿಯ ಪ್ರಕರಣಗಳಿದ್ದು, 769 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾಥಮಿಕವಾಗಿ 5,48,253 ದ್ವಿತೀಯ 4,91,388 ಸೋಂಕಿತರ ಸಂಪರ್ಕಿತರಾಗಿದ್ದಾರೆ. 4,85,789 ಮಂದಿ ಹೋಂ ಕ್ವಾರೆಂಟೈನ್ನಲ್ಲಿದ್ದಾರೆ. ಈವರೆಗೆ 32,73,871 ಮಂದಿಗೆ ಕೊರೊನಾ ಪರೀಕ್ಷೆಗೊಳಪಡಿಸಲಾಗಿದೆ .