ಬೆಂಗಳೂರು: ಕಾರ್ಯನಿರತ ಪತ್ರಕರ್ತರ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿತು.
ಮುಖ್ಯಮಂತ್ರಿ ಭೇಟಿ ಮಾಡಿದ ಕಾರ್ಯನಿರತ ಪತ್ರಕರ್ತರ ನಿಯೋಗ - ಶಿವಾನಂದ ತಗಡೂರು
ಕಾರ್ಯನಿರತ ಪತ್ರಕರ್ತರ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗ, ಮಂಗಳೂರು ಸೇರಿದಂತೆ ಹಲವೆಡೆ ಕಾರ್ಯನಿರತ ಪತ್ರಕರ್ತರು ಅಕಾಲಿಕ ನಿಧನರಾಗಿದ್ದು, ಅವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿತು. ಅಲ್ಲದೇ ಪತ್ರಕರ್ತರು ಹಾಗೂ ಕುಟುಂಬಸ್ಥರಿಗೆ ಹೆಲ್ತ್ ಕಾರ್ಡ್ ನೀಡಬೇಕು, ಎಲ್ಲಾ ಸಮುದಾಯದ ಹಿಂದುಳಿದ ಪತ್ರಕರ್ತರಿಗೆ ಮಿಡಿಯಾ ಕಿಟ್ ವಿತರಣೆ ಮಾಡಬೇಕು, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಬೇಕು ಎಂದು ಮನವಿ ಸಲ್ಲಿಸಿತು.
ಪತ್ರಕರ್ತರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಹೆಲ್ತ್ ಕಾರ್ಡ್ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒಪ್ಪಿಗೆ ನೀಡಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾಹಿತಿ ನೀಡಿದ್ದಾರೆ.