ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕಗಳನ್ನ ನಿಷೇಧಿಸಬೇಕೆಂದು ವಕೀಲರಾದ ಹರ್ಷ ಮುತಾಲಿಕ್ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
ಮಸೀದಿಗಳ ಧ್ವನಿವರ್ಧಕ ನಿಷೇಧಿಸುವಂತೆ ಡಿಜಿಗೆ ವಕೀಲರಿಂದ ಪತ್ರ - ರಾಜ್ಯಾದ್ಯಂತ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕ
ಡಿಜಿ, ಐಜಿಪಿ ಪ್ರವೀಣ್ ಸೂದ್ ಅವರಿಗೆ ಪತ್ರವೊಂದನ್ನು ಬರೆದಿರುವ ವಕೀಲರಾದ ಹರ್ಷ ಮುತಾಲಿಕ್, ರಾಜ್ಯಾದ್ಯಂತ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕಗಳನ್ನ ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಲ್ಲಿಸುವ ಪ್ರಾರ್ಥನೆಯಿಂದ ಬಹಳ ಶಬ್ದ ಉಂಟಾಗುತ್ತದೆ. ಇದರಿಂದ ಅನೇಕ ತೊಂದರೆಯಾಗುತ್ತಿವೆ. ರಾಜ್ಯಾದ್ಯಂತ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ಧಕ ಹಾಗೂ ಮೈಕ್ರೋ ಫೋನ್ ಬಳಕೆ ಮಾಡಬಾರದು ಎಂದು ಈಗಾಗಲೇ ನ್ಯಾಯಾಲಯ ಕೂಡ ಆದೇಶ ನೀಡಿದೆ. ಆದರೆ ಮಸೀದಿಗಳು ಇದನ್ನ ಪಾಲನೆ ಮಾಡಿಲ್ಲ ಎಂದು ಪತ್ರದಲ್ಲಿ ಹರ್ಷ ಮುತಾಲಿಕ್ ಆರೋಪಿಸಿದ್ದಾರೆ.
ಪೊಲೀಸ್ ಇಲಾಖೆ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ಕೂಡ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮಾಡಬಾರದು ಎಂದು ಆದೇಶ ನೀಡಿತ್ತು. ಅಲ್ಲದೇ ಆದೇಶ ಉಲ್ಲಂಘನೆ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು ಎಂದು ವಕೀಲರು ತಿಳಿಸಿದ್ದಾರೆ.