ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದ ಸಿಡಿಎಸ್ ಬಿಪಿನ್ ರಾವತ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ಟಿ.ಕೆ.ವಸಂತ್ ಕುಮಾರ್ (40) ಬಂಧಿತ ಆರೋಪಿ. ಮೈಸೂರು ಮೂಲದ ವಸಂತ್, ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದ ಬಿಪಿನ್ ರಾವತ್ ಅವರ ಬಗ್ಗೆ ತನ್ನ ಫೇಸ್ಬುಕ್ ಖಾತೆಯಿಂದ ಆಕ್ಷೇಪಾರ್ಹವಾಗಿ ಪೋಸ್ಟ್ ಮಾಡಿದ್ದ.