ಬೆಂಗಳೂರು: ಯಲಹಂಕ ಬಳಿಯ ರಾಷ್ಟ್ರೀಯ ಹೆದ್ದಾರಿ 07ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಯಲಹಂಕ ಬಳಿ ಭೀಕರ ಅಪಘಾತ: ಓರ್ವ ಸಾವು, ಇಬ್ಬರ ಸ್ಥಿತಿ ಚಿಂತಾಜನಕ - ಯಲಹಂಕ ಹೆದ್ದಾರಿ ಬೈಕ್ ಕಾರು ಅಪಘಾತ
ಯಲಹಂಕ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಎರಡು ಬೈಕ್, ಟೆಂಪೋ ನಡುವೆ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿ, ಅವರ ಸ್ಥಿತಿ ಚಿಂತಾಜನಕವಾಗಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಭೀಕರ ಅಪಘಾತ
ಕಾರು, ಎರಡು ಬೈಕ್, ಟೆಂಪೋ ನಡುವೆ ಅಪಘಾತ ಸಂಭವಿಸಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
5 ಕಿ.ಮೀ. ಗೂ ಹೆಚ್ಚು ಏರ್ಪೋರ್ಟ್ ರಸ್ತೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 07ರ ಯಲಹಂಕ ಬಳಿಯ ಹುಣಸಮಾರನಹಳ್ಳಿ ಬಳಿ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಜಾಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.