ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ದಿನವೇ ನಗರದಲ್ಲಿ ನೆತ್ತರು ಹರಿದಿದೆ. ತಡರಾತ್ರಿ ಕುಡಿದ ಅಮಲಿನಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದೇವರಜೀವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಡಿ.ಜೆ ಹಳ್ಳಿಯ ಶ್ರೀನಿವಾಸನಗರ ನಿವಾಸಿ ನಿತೇಶ್ ಕೊಲೆಯಾದ ವ್ಯಕ್ತಿ. ಘಟನೆ ಸಂಬಂಧ ಮೃತರ ಸ್ನೇಹಿತ ಪ್ರಶಾಂಶ್ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸ್ನೇಹಿತರಾಗಿದ್ದ ನಿತೇಶ್ ಹಾಗೂ ಪ್ರಶಾಂತ್ ತಡರಾತ್ರಿ ಒಟ್ಟಿಗೆ ಪಾರ್ಟಿ ಮಾಡಿದ್ದರು. ಕುಡಿದ ಅಮಲಿನಲ್ಲಿ ನಿತೇಶ್ ಕಾಲಿಗೆ ಒದ್ದಿದ್ದಾನೆ. ಇದರಿಂದ ಅಸಮಾಧಾನಗೊಂಡು ಪ್ರಶಾಂತ್ ಜಗಳ ತೆಗೆದಿದ್ದಾನೆ.