ಕರ್ನಾಟಕ

karnataka

ETV Bharat / city

ಸುದ್ದಗುಂಟೆಪಾಳ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ: ಪ್ರಕರಣ ದಾಖಲು - A real estate Businessman killed saddugunte palya

ಕೆಲಸದ ನಿಮಿತ್ತ ನಗರಕ್ಕೆ ಬಂದಿದ್ದ ಮೈಸೂರಿನ ರಿಯಲ್ ಎಸ್ಟೇಟ್ ಉದ್ಯಮಿ ಒಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಎಸ್.ಜಿ. ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

kill
kill

By

Published : Mar 21, 2021, 6:40 AM IST

ಬೆಂಗಳೂರು: ಮೈಸೂರಿನಿಂದ ನಗರಕ್ಕೆ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಮೈಸೂರಿನ ನಿವಾಸಿ ಮೊಹಮದ್ ಶಫಿ (32) ಹತ್ಯೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಶುಕ್ರವಾರ ಮೈಸೂರಿನಿಂದ ಕೆಲಸದ ನಿಮಿತ್ತ ಶಫಿ ಬೆಂಗಳೂರಿನ ಗುರಪ್ಪನ ಪಾಳ್ಯಕ್ಕೆ ಬಂದಿದ್ದರು. ಸಂಜೆ 6.30 ರ ಸುಮಾರಿಗೆ ಸುದ್ದಗುಂಟೆಪಾಳ್ಯದ ಟಿಂಬರ್​ಗಲ್ಲಿ ಬಳಿ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಶಫಿ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದು ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಜವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.

ABOUT THE AUTHOR

...view details