ಬೆಂಗಳೂರು:ಮದ್ಯಪಾನ ಮಾಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ ತನ್ನ ಸ್ನೇಹಿತನನ್ನು ಯುವಕನೋರ್ವ ಕೊಲೆ ಮಾಡಿದ್ದು, ಆರೋಪಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.
ಅಜಿತ್ ಅಲಿಯಾಸ್ ಚೋಟು (30) ಕೊಲೆಯಾದವನು. ಈತನ ಸ್ನೇಹಿತ ಬಳ್ಳಾರಿ ಜಿಲ್ಲೆ ಹೊಸಪೇಟೆ ಮೂಲದ ಚಂದ್ರಕುಮಾರ್ ಕೊಲೆಗೈದ ಆರೋಪಿ. ಅಜಿತ್ ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಈ ವೇಳೆ ಇಬ್ಬರಿಗೂ ಪರಿಚಯವಾಗಿತ್ತು. ಇಬ್ಬರೂ ಬಸ್ ನಿಲ್ದಾಣ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಮಲಗುತ್ತಿದ್ದರಂತೆ.