ಬೆಂಗಳೂರು :ಪಾಲಿಕೆ ಹಾಗೂ ಸರ್ಕಾರದ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸಲು ಆಮ್ ಆದ್ಮಿ ಪಕ್ಷ 'ಗೊರಕೆ ಸಾಕು ಪೊರಕೆ ಬೇಕು' ಅಭಿಯಾನ ಹಮ್ಮಿಕೊಂಡಿದ್ದು, ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರಿನ ಜನತೆ ಮೂರು ಪಕ್ಷಗಳ ಕೆಟ್ಟ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಹೀಗಾಗಿ ಬಿಬಿಎಂಪಿ ಹಾಗೂ ಸರ್ಕಾರದ ವೈಫಲ್ಯಗಳನ್ನು ಮನೆ ಮನೆಗೆ ತಲುಪಿಸುವ ಅಭಿಯಾನವನ್ನು ಪ್ರತಿ ವಾರ ಮಾಡಲಿದ್ದೇವೆ. ಈ ಬಾರಿ ಬಿಬಿಎಂಪಿಯಲ್ಲಿ ಆಮ್ ಆದ್ಮಿ ಪಕ್ಷದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದರು.