ಬೆಂಗಳೂರು: ನಿರ್ಭಯಾ ನಿಧಿ ಹಗರಣ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ವರ್ಗಾವಣೆ ಖಂಡಿಸಿ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಯಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದೆ. ನ್ಯಾಯಯುತ ತನಿಖೆ ನಡೆಸುತ್ತಿದ್ದ ಐಪಿಎಸ್ ಅಧಿಕಾರಿ ರೂಪಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಎಎಪಿ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.