ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ನಗರದ ಚಿಕ್ಕಜಾಲ ಠಾಣೆಯ ಇನ್ಸ್ಪೆಕ್ಟರ್ ರಾಘವೇಂದ್ರ ಸಿಕ್ಕಿಬಿದ್ದಿದ್ದಾರೆ. ಎರಡು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಯಲ್ಲಿ ಲಾಕ್ ಆಗಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಜಮೀನು ತಕರಾರು ಬಗೆಹರಿಸುವ ಸಂಬಂಧ ವ್ಯಕ್ತಿಯೊಬ್ಬರಿಗೆ 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿಕ್ಕಜಾಲ ಠಾಣೆಯ ಇನ್ಸ್ ಪೆಕ್ಟರ್ ಎರಡು ಬಾರಿ ನಾಲ್ಕು ಲಕ್ಷ ಹಣವನ್ನು ಈಗಾಗಲೇ ಪಡೆದಿದ್ದ. ಈಗಾಗಲೇ ಎಂಟು ಲಕ್ಷ ಹಣ ಪಡೆದಿದ್ದ ಎಂದು ದೂರುದಾರರು ಎಸಿಬಿಗೆ ದೂರು ನೀಡಿದ್ದರು.