ಬೆಂಗಳೂರು:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (Multi-crore scam at Bengaluru Development Authority) ಬಹುಕೋಟಿ ಹಗರಣ ಬಯಲಿಗೆಳೆದಿರುವ ಭ್ರಷ್ಟಾಚಾರ ನಿಗ್ರಹ ದಳದ (Anti-Corruption Bureau -ACB) ಅಧಿಕಾರಿಗಳು ಇಂದು ಸಹ ದಾಳಿ ಮುಂದುವರೆಸಿ ಮೂಲ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಳೆದ ಶುಕ್ರವಾರ ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ (ACB raid at BDA office) 134 ಕೋಟಿ ರೂ. ಮೌಲ್ಯದ ಭೂ ಅಕ್ರಮ ಪತ್ತೆ ಹಚ್ಚಿದ್ದರು. ಅಕ್ರಮಕ್ಕೆ ಸಂಬಂಧಿಸಿದ ದಾಖಲಾತಿ ಜಪ್ತಿ ಮಾಡಿಕೊಂಡಿದ್ದರು. ಭಾನುವಾರ ಹಾಗೂ ಸೋಮವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ದಾಳಿಯನ್ನು ಇಂದು ಮುಂದುವರೆಸಿದ್ದಾರೆ.
ಬಿಡಿಎ ಕಚೇರಿಯಲ್ಲಿ ಭೂ ಅಕ್ರಮಕ್ಕೆ ಸಂಬಂಧಿಸಿ ದಾಖಲಾತಿಗಳನ್ನು ಈಗಾಗಲೇ ಜಪ್ತಿ ಮಾಡಿಕೊಂಡಿರುವ ಎಸಿಬಿ, ಮೂಲ ದಾಖಲಾತಿ ನೀಡುವಂತೆ ಬಿಡಿಎ ಅಧಿಕಾರಿಗಳಿಗೆ ತಾಕೀತು ಮಾಡಿದೆ. ಒಂದು ವೇಳೆ, ಅಗತ್ಯ ಮೂಲ ದಾಖಲಾತಿ ನೀಡದಿದ್ದಲ್ಲಿ ಕಂದಾಯ ಇಲಾಖೆಯಿಂದ ಪಡೆಯಲು ಮುಂದಾಗಿದೆ.
ಇದನ್ನೂ ಓದಿ: ACB ದಾಳಿ ಬಳಿಕ BDA ವಿರುದ್ಧ ಸಾಲು ಸಾಲು ದೂರುಗಳು.. ಬಯಲಾಗುತ್ತಾ ಬಿಡಿಎ ಬ್ರಹ್ಮಾಂಡ ಭ್ರಷ್ಟಾಚಾರ!?