ಕರ್ನಾಟಕ

karnataka

ETV Bharat / city

ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ.. ದಾಳಿ ನಡೆಸಿದ ಎಸಿಬಿ, ಅಧಿಕಾರಿಗಳಿಂದ ದಾಖಲೆ ಪರಿಶೀಲನೆ - ಬೆಂಗಳೂರಿನಲ್ಲಿ ಭೋವಿ ಅಭಿವೃದ್ಧಿ ನಿಗಮ

ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ACB raid on Bhovi development corporation in Bengaluru, ACB raid in Bangalore, Bhovi development corporation in Bengaluru, Bengaluru news, ಬೆಂಗಳೂರಿನಲ್ಲಿ ಭೋವಿ ಅಭಿವೃದ್ಧಿ ನಿಗಮದ ಮೇಲೆ ಎಸಿಬಿ ದಾಳಿ, ಬೆಂಗಳೂರಿನಲ್ಲಿ ಎಸಿಬಿ ದಾಳಿ, ಬೆಂಗಳೂರಿನಲ್ಲಿ ಭೋವಿ ಅಭಿವೃದ್ಧಿ ನಿಗಮ, ಬೆಂಗಳೂರು ಸುದ್ದಿ,
ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ

By

Published : Apr 29, 2022, 7:02 AM IST

ಬೆಂಗಳೂರು:ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಹಾಗೂ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಗುರುವಾರ ಸಂಜೆ ಸಮಯದಲ್ಲಿ ರಾಜಾಜಿನಗರದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಎಂಡಿ ಲೀಲಾವತಿ ಮತ್ತು ಜಿಎಂ ನಾಗರಾಜಪ್ಪ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ‌ ನಡೆಸಿ ಕಡತಗಳ ಪರಿಶೀಲನೆ ಕೈಗೊಂಡಿದ್ದರು.

ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ

ಭೋವಿ ಅಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಸಂಬಂಧ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಪ್ರಾಥಮಿಕ ತನಿಖೆಯಲ್ಲಿ ಉದ್ಯಮ ಶೀಲತೆ ಯೋಜನೆ, ಐರಾವತ ಯೋಜನೆ, ಗಂಗಾಕಲ್ಯಾಣ, ಭೂ ಒಡೆತನ, ಸಮೃದ್ಧಿ, ನೇರ ಸಾಲ ಹಾಗೂ ಇತರ ಯೋಜನೆಗಳಲ್ಲಿ ಅವ್ಯವಹಾರ ಬೆಳಕಿಗೆ ಬಂದಿತ್ತು. ಹೀಗಾಗಿ ಎಂ.ಡಿ ಲೀಲಾವತಿ ಹಾಗೂ ಜಿ.ಎಂ ನಾಗರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಓದಿ:ಕಲಬುರಗಿ ಭೂಸ್ವಾಧೀನ ಕಚೇರಿ ಮೇಲೆ ಎಸಿಬಿ ದಾಳಿ: ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ವ್ಯವಸ್ಥಾಪಕ

10 ಲಕ್ಷ ರೂ ಹಣ ವಶಕ್ಕೆ: ಬೆಂಗಳೂರು ನಗರ ಎಸಿಬಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆ ಭೋವಿ ಅಭಿವೃದ್ಧಿ ಪ್ರಾಧಿಕಾರದ ಎಂ.ಡಿ ಲೀಲಾವತಿ ಹಾಗೂ ನಾಗರಾಜ್​ರ ಕಚೇರಿ ಹಾಗೂ ಮನೆಗಳ ಮೇಲೆ‌ ದಾಳಿ ಮಾಡಲಾಗಿತ್ತು. ಈ ವೇಳೆ, 10 ಲಕ್ಷ ರೂ ಹಣ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details