ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಬೆಂಗಳೂರು ಉತ್ತರ ತಾಲೂಕಿನ ಯಲಹಂಕದ ನಿವೃತ ವಿಶೇಷ ತಹಶೀಲ್ದಾರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಿವೃತ ತಹಶೀಲ್ದಾರ್ ಮನೆ ಮೇಲೆ ಎಸಿಬಿ ದಾಳಿ
ಯಲಹಂಕ ತಾಲೂಕಿನ ಹುಣಸಮಾರನಹಳ್ಳಿ ಗ್ರಾಮದ ಸರ್ವೇ ನಂ.184ರಲ್ಲಿ 4 ಎಕರೆ ಸರ್ಕಾರಿ ಜಮೀನಿನ ಖಾತೆ ಬದಲಾವಣೆ ಮಾಡಿ, ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪವನ್ನು ತಹಶೀಲ್ದಾರ್ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಎಸಿಬಿ ಅಧಿಕಾರಿಗಳು ಪ್ರತ್ಯೇಕ ಮೂರು ತಂಡಗಳಾಗಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ನಿವೃತ ತಹಶೀಲ್ದಾರ್
ಯಲಹಂಕ ತಾಲೂಕಿನ ಹುಣಸಮಾರನಹಳ್ಳಿ ಗ್ರಾಮದ ಸರ್ವೇ ನಂ.184ರಲ್ಲಿ 4 ಎಕರೆ ಸರ್ಕಾರಿ ಜಮೀನಿನ ಖಾತೆ ಬದಲಾವಣೆ ಮಾಡಿ, ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪವನ್ನು ತಹಶೀಲ್ದಾರ್ ಎದುರಿಸುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಎಸಿಬಿ ಅಧಿಕಾರಿಗಳು ಪ್ರತ್ಯೇಕ ಮೂರು ತಂಡಗಳಾಗಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಯಲಹಂಕ ಕಚೇರಿಯ ರೆಕಾರ್ಡ್ ರೂಂ ವಿಷಯ ನಿರ್ವಾಹಕ ಮಂಜುನಾಥ್ ಮನೆ ಮೇಲೆಯೂ ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.