ಬೆಂಗಳೂರು: ಭ್ರಷ್ಟ ಸರ್ಕಾರಿ ಅಧಿಕಾರಿಗಳ ವಿರುದ್ಧ ಇತ್ತೀಚೆಗೆ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಾಲ್ವರ ಮೇಲೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
ಇತ್ತೀಚೆಗೆ ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಸೇರಿ 60ಕ್ಕಿಂತ ಹೆಚ್ಚು ಕಡೆಗಳಲ್ಲಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಈ ಪೈಕಿ ಬೆಂಗಳೂರಿನಲ್ಲಿ ಸರ್ಕಾರಿ ಅಧಿಕಾರಿಗಳ ವಿರುದ್ಧ ದಾಳಿ ಮಾಡಿ ಕೋಟ್ಯಂತರ ರೂಪಾಯಿ ಆಸ್ತಿ ಜಪ್ತಿ ಮಾಡಿಕೊಂಡಿತ್ತು.