ಬೆಂಗಳೂರು: ನಗರ ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ರಾಜ್ಯದ ಹಲವೆಡೆ ಎಸಿಬಿ ದಾಳಿ... ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತರ ನಿವಾಸಗಳಲ್ಲಿ ಶೋಧ - undefined
ಸಿಲಿಕಾನ್ ಸಿಟಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕರಾದ ನಾರಾಯಣಸ್ವಾಮಿ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾಗಿರುವ ನಾರಾಯಣಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕರಾದ ನಾರಾಯಣಸ್ವಾಮಿ ಹಲವಾರು ಅವ್ಯಹಾರ ನಡೆಸುತ್ತಿದ್ದರು ಎಂಬ ಆರೋಪವಿದೆ. ಹೀಗಾಗಿ ಎಸಿಬಿ ಎಸ್ಪಿ ಸಂಜೀವ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಇನ್ನು ನಾರಯಣಸ್ವಾಮಿಯ ಮಾವನ ಮನೆ, ಕೋಲಾರದ ಅಂತರಗಂಗೆ ರಸ್ತೆ ಬಳಿ ಇರುವ ಮನೆ, ಚಿಂತಾಮಣಿಯ ಮಾದರಕಲ್ಲು ಸ್ವಗ್ರಾಮದ ನಿವಾಸ, ಬೆಂಗಳೂರು ಜಯನಗರ ಮನೆ ಹಾಗೂ ಶಾಂತಿನಗರ ಕಚೇರಿ ಸೇರಿದಂತೆ ಎಲ್ಲಾ ಕಡೆ ಏಕಕಾಲಕ್ಕೆ ಕಾರ್ಯಾಚರಣೆ ನಡೆದಿದ್ದು, ದಾಳಿ ಮುಂದುವರೆದಿದೆ. ಇನ್ನು ಎಸಿಬಿ ಅಧಿಕಾರಿಗಳು ದಾಖಲೆ ಪತ್ರಗಳು ಸೇರಿದಂತೆ ಹಣ, ಆಸ್ತಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.