ಬೆಂಗಳೂರು :ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಉದ್ದೇಶಿತ ಡಾ.ಶಿವರಾಮ ಕಾರಂತ್ ಬಡಾವಣೆಯ ಸುಮಾರು 2500 ಕಟ್ಟಡಗಳನ್ನು ಸರ್ವೋಚ್ಛ ನ್ಯಾಯಾಲಯ ಸಕ್ರಮಗೊಳಿಸಿ ಆದೇಶ ಹೊರಡಿಸಿದೆ. ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲು ಬಿಡಿಎ ಸಜ್ಜಾಗಿದೆ ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ನೇತೃತ್ವದ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಸಲ್ಲಿಸಿದ ವರದಿಯ ಆಧಾರದ ಮೇಲೆ 2018ಕ್ಕಿಂತ ಮುಂಚೆ ಸ್ಥಳೀಯ ಪ್ರಾಧಿಕಾರದ ಅನುಮತಿ ಪಡೆದು ಕಟ್ಟಿದ ಕಟ್ಟಡಗಳ ಮಾಲೀಕರು ಸಲ್ಲಿಸಿದ ದಾಖಲೆಗಳ ಮೇಲೆ ಸರ್ವೋಚ್ಛ ನ್ಯಾಯಾಲಯ ಸಕ್ರಮಗೊಳಿಸಿ ಆದೇಶಿಸಿದೆ ಎಂದು ಮಾಹಿತಿ ನೀಡಿದೆ.
ನ್ಯಾಯಾಲಯದ ಆದೇಶದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕ್ರಮಕೈಗೊಂಡಿದ್ದು, ಕಟ್ಟಡಗಳ ಮಾಲೀಕರಿಗೆ ಸಕ್ರಮ ಪ್ರಮಾಣ ಪತ್ರವನ್ನು ಮೇ 13ರಿಂದ ಡಾ.ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಮೇಡಿ ಅಗ್ರಹಾರದ ಉರ್ದು ಪ್ರಾಥಮಿಕ ಶಾಲೆಯಲ್ಲಿ ನೀಡಲಾಗುವುದು ಎಂದಿದೆ.