ಕರ್ನಾಟಕ

karnataka

ETV Bharat / city

ಆದಿಚುಂಚನಗಿರಿ ಶ್ರೀಗಳ ಫೋನ್ ಟ್ಯಾಪಿಂಗ್ ಆರೋಪ: ಹೆಚ್​ಡಿಕೆ ವಿಷಾದ - ನಿರ್ಮಲಾನಂದರು

ನನ್ನ ಅಧಿಕಾರವಧಿಯಲ್ಲಿ ಆದಿಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಟ್ವೀಟ್ ಮೂಲಕ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹೆಚ್​ಡಿಕೆ

By

Published : Sep 29, 2019, 3:10 PM IST

ಬೆಂಗಳೂರು:ತಮ್ಮ ಅಧಿಕಾರಾವಧಿಯಲ್ಲಿ ಆದಿಚುಂಚನಗಿರಿ ಶ್ರೀಗಳ ದೂರವಾಣಿ ಕೂಡ ಕದ್ದಾಲಿಕೆ ಆಗಿದೆ ಎಂಬ ಆರೋಪಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹೆಚ್​ಡಿಕೆ ಟ್ವೀಟ್

ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ನನ್ನ ಅಧಿಕಾರವಧಿಯಲ್ಲಿ ಆದಿಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ‌ ಎಂದಿದ್ದಾರೆ.

ಹೆಚ್​ಡಿಕೆ ಟ್ವೀಟ್

ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ. ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ ಎಂದು ಹೆಚ್​​ಡಿಕೆ ಟ್ವೀಟ್​ ಮಾಡಿದ್ದಾರೆ.

ABOUT THE AUTHOR

...view details