ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಆಧಾರದಲ್ಲಿ ಮೀಸಲಾತಿ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಮೀಸಲಾತಿಗೆ ಕ್ರಮ : ಸಿಎಂ ಬೊಮ್ಮಾಯಿ - ಸಿಎಂ ಬೊಮ್ಮಾಯಿ
ಮಹಾರಾಷ್ಟ್ರದ ಮರಾಠ ಮೀಸಲಾತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಅದನ್ನು ಗಮನದಲ್ಲಿರಿಸಿಕೊಂಡು ಆಯೋಗ ಪರಿಶೀಲನೆ ನಡೆಸಬೇಕಾಗಿದೆ. ಇಂದಿರಾ ಸಹಾನಿ ಗೈಡ್‌ಲೈನ್ಸ್ ಪ್ರಕಾರ ಮೀಸಲಾತಿ ನೀಡುವ ಬಗ್ಗೆ ಕೆಲಸ ನಡೆಯುತ್ತಿದೆ. 15 ವಿವಿಧ ಸಮುದಾಯಗಳು ಮೀಸಲಾತಿಗೆ ಮನವಿ ಸಲ್ಲಿಸಿವೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪರಿಶೀಲನೆ ಮಾಡಿ ಸರ್ಕಾರ ಮುಂದಿನ ಕ್ರಮಕೈಗೊಳ್ಳಲಿದೆ ಎಂದು ಸಿಎಂ ಭರವಸೆ ನೀಡಿದರು..
ವಿಧಾನಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮೀಸಲಾತಿ ಕಲ್ಪಿಸುವ ಸಂಬಂಧ ವಿವಿಧ ಸಮುದಾಯಗಳು ಬೇಡಿಕೆ ಇಟ್ಟಿವೆ. ಪಂಚಮಸಾಲಿ ಸಮುದಾಯದವರು 3Bಯಿಂದ 2A ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಎಲ್ಲಾ ಸಮುದಾಯಗಳ ಮೀಸಲಾತಿ ಬೇಡಿಕೆ ಸಂಬಂಧ ಪರಿಶೀಲನೆ ನಡೆಸುತ್ತಿದೆ ಎಂದರು.
ಇತ್ತೀಚೆಗೆ ಕೇಂದ್ರ ಸರ್ಕಾರ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯನ್ನು ತಯಾರಿಸುವ ಹಕ್ಕನ್ನು ರಾಜ್ಯಗಳಿಗೆ ಮರಳಿಸುವ ಮಹತ್ವದ ಸಂವಿಧಾನ ತಿದ್ದುಪಡಿ ತಂದಿದೆ. ಅದರಂತೆ ಒಬಿಸಿ ಮೀಸಲಾತಿ ಪಟ್ಟಿ ತಯಾರಿಸುವ ಅಧಿಕಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ವರ್ಗಾವಣೆ ಆಗಿದೆ. ಆಯೋಗ, ಶಿಕ್ಷಣ ಹಾಗೂ ಉದ್ಯೋಗ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಇದರ ಸಂಪೂರ್ಣ ಮಾಹಿತಿ ಸಂಗ್ರಹಣೆ ಅವಶ್ಯಕತೆ ಇದೆ ಎಂದರು.
ಮಹಾರಾಷ್ಟ್ರದ ಮರಾಠ ಮೀಸಲಾತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಅದನ್ನು ಗಮನದಲ್ಲಿರಿಸಿಕೊಂಡು ಆಯೋಗ ಪರಿಶೀಲನೆ ನಡೆಸಬೇಕಾಗಿದೆ. ಇಂದಿರಾ ಸಹಾನಿ ಗೈಡ್‌ಲೈನ್ಸ್ ಪ್ರಕಾರ ಮೀಸಲಾತಿ ನೀಡುವ ಬಗ್ಗೆ ಕೆಲಸ ನಡೆಯುತ್ತಿದೆ. 15 ವಿವಿಧ ಸಮುದಾಯಗಳು ಮೀಸಲಾತಿಗೆ ಮನವಿ ಸಲ್ಲಿಸಿವೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪರಿಶೀಲನೆ ಮಾಡಿ ಸರ್ಕಾರ ಮುಂದಿನ ಕ್ರಮಕೈಗೊಳ್ಳಲಿದೆ ಎಂದು ಸಿಎಂ ಭರವಸೆ ನೀಡಿದರು.