ಬೆಂಗಳೂರು:ವಿವಿಧ ಅಪರಾಧ ಪ್ರಕರಣಗಳ ತನಿಖೆ ವೇಳೆ ಲೋಪ ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಗೊಳ್ಳುವುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಎಚ್ಚರಿಸಿದ್ದಾರೆ.
ಪ್ರಕರಣದ ತನಿಖೆ ವೇಳೆ ಅಧಿಕಾರಿಗಳು ಎಸಗುವ ಲೋಪದಿಂದ ನ್ಯಾಯಾಲಯದಲ್ಲಿ ಅವರಿಗೆ ಶಿಕ್ಷೆ ಕೊಡಿಸಲು ಸಾಧ್ಯವಾಗುತ್ತಿಲ್ಲ. ಸರಿಯಾದ ಸಾಕ್ಷಿ, ಆಧಾರಗಳು ಸಕಾಲಕ್ಕೆ ಹಾಜರುಪಡಿಸಿದ ಕಾರಣ ಕೋರ್ಟ್ನಲ್ಲಿ ಆರೋಪಿಗಳಿಗೆ ಲಾಭವಾಗುತ್ತಿದೆ. ಹೀಗಾಗಿ ಇನ್ಮುಂದೆ ತನಿಖೆ ವೇಳೆ ನಿರ್ಲಕ್ಷ್ಯ ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.