ಬೆಂಗಳೂರು: ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಉಂಟಾಗಿದ್ದ ಪ್ರವಾಹಕ್ಕೆ ಸಿಲುಕಿ ನಲುಗಿದ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ಪುನೀತ್ ರಾಜ್ಕುಮಾರ್ ಅವರು ₹ 5 ಲಕ್ಷ ದೇಣಿಗೆ ನೀಡಿದ್ದಾರೆ.
ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 5 ಲಕ್ಷ ನೀಡಿದ ಪವರ್ ಸ್ಟಾರ್ - ಫೇಸ್ಬುಕ್ ಲೈವ್
ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಉಂಟಾಗಿದ್ದ ಪ್ರವಾಹದಿಂದಾಗಿ ನಲುಗಿದ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ನಟ ಪುನೀತ್ ರಾಜ್ಕುಮಾರ್ ಅವರು ₹ 5 ಲಕ್ಷ ದೇಣಿಗೆ ನೀಡಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಪುನೀತ್ ಭೇಟಿ ನೀಡಿದರು. ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಪರಿಹಾರ ನಿಧಿಗೆ ₹ 5 ಲಕ್ಷ ನೆರವು ನೀಡಿದರು. ಯಡಿಯೂರಪ್ಪ ಅವರು ಪುನೀತ್ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಪರಿಹಾರ ನಿಧಿಗೆ ನೆರವು ನೀಡಲು ಬಂದಿದ್ದೆ. ನಾನು ಫೇಸ್ಬುಕ್ ಲೈವ್ಗೆ ಬಂದು ಸಂತ್ರಸ್ತರಿಗೆ ನೆರವಾಗಲು ಹೇಳಿದ ನಂತರ ಸಾಕಷ್ಟು ಮಂದಿ ನೆರವಿನ ಹಸ್ತ ಚಾಚಿದ್ದಾರೆ. ಇನ್ನಷ್ಟು ಆರ್ಥಿಕ ನೆರವು ಕೊಡುವ ಯೋಜನೆ ಇದೆ. ಇದಕ್ಕಾಗಿ ಇನ್ನೂ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದ್ದೇವೆ. ನಾವೆಲ್ಲ ಕೈಲಾದ ಸಹಾಯ ಮಾಡುತ್ತಿದ್ದೇವೆ ಅಷ್ಟೇ ಎಂದು ಹೇಳಿದರು.