ಬೆಂಗಳೂರು: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಖ್ಯಾತ ನಟ ಸಂಚಾರಿ ವಿಜಯ್ಗೆ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯು ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದೆ.
ನಟನ ಆರೋಗ್ಯ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿರುವ ಆಸ್ಪತ್ರೆ, ಅಪಘಾತ ಆದ ತಕ್ಷಣ ವಿಜಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಮರ್ಜೆನ್ಸಿ ವಾರ್ಡ್ಗೆ ತಂದಾಗ ತುಂಭಾ ಗಂಭೀರ ಸ್ಥಿತಿಯಲ್ಲಿದ್ದರು. ಎ ಸಿಟಿ ಸ್ಕ್ಯಾನ್ ಮಾಡಿದಾಗ ಮೆದುಳಿಗೆ ತೀವ್ರ ಪೆಟ್ಟಾಗಿರುವುದು ಹಾಗೂ ರಕ್ತಸ್ರಾವವಾಗಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಬ್ರೈನ್ ಸರ್ಜರಿ ಮಾಡಲಾಯಿತು. ಸದ್ಯ ವಿಜಯ್ ನ್ಯೂರೋ ಐಸಿಯುನಲ್ಲಿ ಲೈಫ್ ಸಪೋರ್ಟ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.