ಬೆಂಗಳೂರು: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ನಾಳೆ, ನಾಡಿದ್ದು ಮಳೆಯ ಪ್ರಮಾಣ ತಗ್ಗಲಿದ್ದು, ಬಳಿಕ ಮುಂದಿನ ಐದು ದಿನಗಳು ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಈ ಭಾಗದ ಜನರು ತುಸು ಅಲರ್ಟ್ ಆಗಿರಿ... ಕರಾವಳಿ, ಮಲೆನಾಡು ಭಾಗದಲ್ಲಿ ಮತ್ತೆ 5ದಿನ ಭಾರೀ ಮಳೆ ಸಾಧ್ಯತೆ - ವಾಯುಭಾರ ಕುಸಿತ
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ.
ಕರಾವಳಿ, ಮಲೆನಾಡು, ಉಡುಪಿ, ಚಿಕ್ಕಮಗಳೂರು, ಉತ್ತರಕನ್ನಡ ಹಾಗೂ ಕೊಡಗಿನಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ, ಗಾಳಿ ವೇಗ ಹೆಚ್ಚಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು ದಿನದಲ್ಲಿ ಮಲೆನಾಡು ಚಿಕ್ಕಮಗಳೂರಿನಲ್ಲಿ ಮಳೆ ಕಡಿಮೆಯಾಗಲಿದೆ. ನಂತರ ಕರಾವಳಿ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದರು.
ಮಹಾರಾಷ್ಟ್ರದಲ್ಲೂ ಎರಡು ದಿನದಲ್ಲಿ ಮಳೆ ಬಿಡುವು ನೀಡಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಹಾನಿಯಾಗುವ ಸಾಧ್ಯತೆ ಕಡಿಮೆ. ಬೆಂಗಳೂರಲ್ಲೂ ಒಂದೆರಡು ದಿನ ಹಗುರ ಮಳೆಯಾಗಲಿದೆ ಎಂದು ಅವರು ತಿಳಿಸಿದರು.