ಬೆಂಗಳೂರು :ಕರ್ನಾಟಕ ಕೈಗಾರಿಕಾ ನೀತಿ 2020-25ರಲ್ಲಿ ಪ್ರಸ್ತಾಪಿಸಿರುವ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುವ ಉದ್ದೇಶದ 2020ನೇ ಸಾಲಿನ ಕರ್ನಾಟಕ ಸ್ಟಾಂಪ್ (2ನೇ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಇಂದು ಒಪ್ಪಿಗೆ ಪಡೆಯಲಾಯಿತು.
ಕಂದಾಯ ಸಚಿವ ಆರ್.ಅಶೋಕ್ ಅವರು ವಿಧೇಯಕವನ್ನು ಮಂಡಿಸಿ, ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡಲು ಮತ್ತು 2020-21ರ ಆಯವ್ಯಯ ಭಾಷಣದಲ್ಲಿ ಪ್ರಸ್ತಾಪಿಸಿರುವ 35 ಲಕ್ಷ ರೂ.ವರೆಗಿನ ಫ್ಲಾಟ್ ಅಥವಾ ಅಪಾರ್ಟ್‍ಮೆಂಟ್‍ನ ಮೊದಲ ಮಾರಾಟಕ್ಕೆ ಸ್ಟಾಂಪ್ ತೆರಿಗೆ ಕಡಿಮೆ ಮಾಡಲು ಈ ವಿಧೇಯಕ ತರಲಾಗಿದೆ ಎಂದು ಹೇಳಿದರು. ಚರ್ಚೆಯ ನಂತರ ವಿಧೇಯಕವನ್ನು ಸ್ಪೀಕರ್ ಮತಕ್ಕೆ ಹಾಕಿದಾಗ ಧ್ವನಿಮತದ ಒಪ್ಪಿಗೆ ದೊರೆಯಿತು.