ಬೆಂಗಳೂರು:ಕೆಪಿಸಿಸಿ ಅಧ್ಯಕ್ಷರನ್ನು ಇಂದು ಭೇಟಿ ಮಾಡಿ ನನಗೆ ನ್ಯಾಯ ಕೊಡಿ ಅಂತ ಮನವಿ ಮಾಡಿದ್ದೇನೆ ಎಂದು ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರದ ನಿವಾಸಕ್ಕೆ ಇಂದು ಭೇಟಿ ನೀಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ವಿರುದ್ಧ ಕ್ರಮಕ್ಕೆ ಮನವಿ ಸಲ್ಲಿಸಿದ್ದೇನೆ. ಅವರು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಕ್ರಮ ತೆಗೆದುಕೊಳ್ತಾರೆಂಬ ವಿಶ್ವಾಸವಿದೆ. ನನ್ನ ಮನೆಗೆ ಬೆಂಕಿ ಇಟ್ಟ ಹಾಗೂ ಪೊಲೀಸ್ ಠಾಣೆಯನ್ನು ಸುಟ್ಟಿರುವ ವ್ಯಕ್ತಿಗಳು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಆಗಲೇಬೇಕು. ಪಕ್ಷದಿಂದಲೂ ಅವರನ್ನ ಉಚ್ಛಾಟಿಸಬೇಕು ಎಂದರು.