ಕರ್ನಾಟಕ

karnataka

ETV Bharat / city

ಜನರ ಸಮಸ್ಯೆಗಳ ಬರಿಹರಿಸುವಂತೆ ಅಧಿಕಾರಿಗಳಿಗೆ ಖಡಕ್​ ವಾರ್ನಿಂಗ್ ಕೊಟ್ಟ ಸಚಿವ.. - ಕಂದಾಯ ಇಲಾಖೆ

15 ದಿನಕ್ಕೊಮ್ಮೆ ಪ್ರತಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳ‌ ನೇತೃತ್ವದಲ್ಲಿ ತಾಲೂಕು, ಗ್ರಾಮ ಪಂಚಾಯತ್‌ ಅಧಿಕಾರಿಗಳು ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸಚಿವ ಆರ್.ಅಶೋಕ್ ಸೂಚನೆ ನೀಡಿದರು.

all-the-authorities-visit-the-villages

By

Published : Oct 20, 2019, 12:05 AM IST

ಬೆಂಗಳೂರು:ನಮ್ಮ ಸಮಸ್ಯೆಗಳನ್ನು ಆಲಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುತ್ತಿಲ್ಲ. ಅಲ್ಲದೇ ಕೈಗೆ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ 15 ದಿನಕ್ಕೊಮ್ಮೆ ಪ್ರತಿ ಗ್ರಾಮಕ್ಕೆ ಜಿಲ್ಲಾಧಿಕಾರಿ, ತಾಲೂಕು, ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್ ಸೂಚನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ‌ಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ‌ಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಕೇಂದ್ರದಲ್ಲಿ ಉಪವಿಭಾಗಾಧಿಕಾರಿ ನೇತೃತ್ವದ ಹೋಬಳಿ ಕೇಂದ್ರ, ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ಒಂದು ದಿನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಮೂಲಸೌಕರ್ಯ, ಆರೋಗ್ಯ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳಿಗೆ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಜಿಲ್ಲಾದ್ಯಂತ ಸರ್ಕಾರಿ ಕಚೇರಿ, ಶಾಲೆಗಳ ಆವರಣ, ಸಮುದಾಯ ಭವನಗಳ ಆವರಣ, ಗ್ರಾಮ ಪಂಚಾಯತ್‌ಗಳ ಆವರಣ ಮಾತ್ರವಲ್ಲದೇ ರೈತರ ಜಮೀನಿನಲ್ಲಿರುವ ನೀಲಗಿರಿ ಮರಗಳನ್ನು ತೆರವುಗೊಳಿಸಬೇಕು. ಜಿಲ್ಲೆಯಲ್ಲಿ ಅಂತರ್ಜಲ ಕುಸಿತಕ್ಕೆ ಕಾರಣವಾಗಿರುವ ನೀಲಗಿರಿಯನ್ನು ತೆರವುಗೊಳಿಸಿ ಅದರಿಂದ ಬರುವ ಆದಾಯವನ್ನು ಅರಣ್ಯಗಳ ಅಭಿವೃದ್ಧಿ ಕಾರ್ಯಕ್ಕೆ ಬಳಸಬೇಕು ಎಂದು ಅರಣ್ಯಾಧಿಕಾರಿಗಳಿಗೆ ತಿಳಿಸಿದರು.

ರೈತರಿಗೆ ತಂತ್ರಜ್ಞಾನ ಆಧಾರಿತ ತರಬೇತಿ ಕೊರತೆಯಿದ್ದು, ವಿದೇಶಿ ತಂತ್ರಜ್ಞಾನದ ಯೋಜನೆಗಳ ಬಗ್ಗೆ ಹಾಗೂ ಹನಿ ನೀರಾವರಿ ಪದ್ಧತಿ ವ್ಯವಸ್ಥೆಯ ಕುರಿತು ರೈತರಿಗೆ ಸೂಕ್ತ ತರಬೇತಿ ನೀಡಬೇಕು. ಸರ್ಕಾರಿ ಸೌಲಭ್ಯಗಳನ್ನು ರೈತರು ಪಡೆಯುವಂತಾಗಬೇಕು ಎಂದು ತೋಟಗಾರಿಕೆ ಇಲಾಖಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ 64‌ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 583 ಘಟಕಗಳು ಕಾರ್ಯನಿರ್ವಹಿಸುತ್ತಿವೆ. 28 ಕಾರ್ಯನಿರ್ವಹಿಸದಿರುವುದರ ಬಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖಾಧಿಕಾರಿಗಳು ಎಚ್ಚರ ವಹಿಸಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ, ಆಹಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಭೂಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ಪಡೆದರು.

ABOUT THE AUTHOR

...view details