ಕರ್ನಾಟಕ

karnataka

ETV Bharat / city

ಮಸೀದಿ ಧ್ವನಿವರ್ಧಕಗಳಿಂದ ಶಬ್ಧಮಾಲಿನ್ಯ ಆರೋಪ: ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಸರ್ಕಾರ - ಧ್ವನಿವರ್ಧಕಗಳಿಂದ ಶಬ್ಧಮಾಲಿನ್ಯ

ಥಣಿಸಂದ್ರ ಮುಖ್ಯ ರಸ್ತೆಯ ಐಕಾನ್ ಅಪಾರ್ಟ್ಮೆಂಟ್‌ನ 32 ಮಂದಿ ನಿವಾಸಿಗಳು ಸುತ್ತಲಿನ 16 ಮಸೀದಿಗಳ ವಿರುದ್ಧ ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಹಂಗಾಮಿ ಸಿಜೆ ಎಸ್ ಸಿ ಶರ್ಮಾ ನೇತೃತ್ವದ ವಿಭಾಗೀಯ ಪೀಠದ ವಿಚಾರಣೆ ನಡೆಸಿತು.

hc
hc

By

Published : Oct 6, 2021, 3:20 AM IST

ಬೆಂಗಳೂರು: ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ಮಿತಿಮೀರಿದ ಶಬ್ದಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸರ್ಕಾರ ನಾಲ್ಕು ವಾರ ಕಾಲಾವಕಾಶ ಕೋರಿದೆ.
ಈ ವಿಚಾರವಾಗಿ ಪಿ.ರಾಕೇಶ್ ಮತ್ತು ಅಯ್ಯಪ್ಪ ದಾಸ್ ಬಾಲಗೋಪಾಲ್ ಸೇರಿದಂತೆ ಥಣಿಸಂದ್ರ ಮುಖ್ಯ ರಸ್ತೆಯ ಐಕಾನ್ ಅಪಾರ್ಟ್ಮೆಂಟ್‌ನ 32 ಮಂದಿ ನಿವಾಸಿಗಳು ಸುತ್ತಲಿನ 16 ಮಸೀದಿಗಳ ವಿರುದ್ಧ ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಹಂಗಾಮಿ ಸಿಜೆ ಎಸ್ ಸಿ ಶರ್ಮಾ ನೇತೃತ್ವದ ವಿಭಾಗೀಯ ಪೀಠದ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳು-2000'ರ ಅನ್ವಯ ಲಿಖಿತ ಪರವಾನಿಗೆ ಪಡೆಯದ ಹೊರತು ಧ್ವನಿವರ್ಧಕಗಳನ್ನು ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣಪತ್ರ ಸಲ್ಲಿಸುವಂತೆ ನಗರದ ಥಣಿಸಂದ್ರ ಹಾಗೂ ಸುತ್ತಲಿನ 16 ಮಸೀದಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿತ್ತು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಮಸೀದಿಗಳ ಆಡಳಿತ ಮಂಡಳಿ ಪರ ವಕೀಲರು, ಎಲ್ಲಾ 16 ಮಸೀದಿಗಳಲ್ಲಿ ಶಬ್ದ ಅಳತೆ ಮತ್ತು ನಿಯಂತ್ರಣ ಮಾಪಕಗಳನ್ನು ಅಳವಡಿಸಲಾಗಿದೆ. ಇದು ಶಬ್ದ ಮಿತಿಯನ್ನು ನಿಯಂತ್ರಿಸುತ್ತದೆ. ಒಂದೊಮ್ಮೆ ಮಿತಿಗಿಂತ ಅಧಿಕ ಶಬ್ದ ಉಂಟಾದರೆ ಅದು ನೇರವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಗಮನಕ್ಕೆ ಬರುತ್ತದೆ. ಅದಕ್ಕೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಅಲ್ಲದೇ ಧ್ವನಿವರ್ಧಕಗಳ ಬಳಕೆಗೆ ಲಿಖಿತ ಪರವಾನಿಗೆ ಪಡೆದುಕೊಳ್ಳಲಾಗಿದೆ ಎಂದು ವಿವರಣೆ ನೀಡಿದರು.
ವಾದ-ಪ್ರತಿವಾದ ಆಲಿಸಿದ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿತು. ಅಲ್ಲದೇ, ರಾಷ್ಟೀಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ ಪ್ರಕಾರ, ಈ ಅರ್ಜಿಯ ವಿಚಾರಣಾ ಮಾನ್ಯತೆಯನ್ನು ಮುಂದಿನ ವಿಚಾರಣೆ ದಿನದಂದು ಪರಿಶೀಲಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ನ.16ಕ್ಕೆ ಮುಂದೂಡಿತು.

ABOUT THE AUTHOR

...view details