ಬೆಂಗಳೂರು: ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳಲ್ಲಿ ಕೆಲವರಿಗೆ ಸೋಂಕು ತಗುಲಿರುವುದು ಕಂಡು ಬಂದ ಹಿನ್ನೆಲೆ ರಾಮನಗರ ಜೈಲಿನಿಂದ ಆರೋಪಿಗಳನ್ನು ಸಿಲಿಕಾನ್ ಸಿಟಿಯ ಹಜ್ ಭವನಕ್ಕೆ ಶಿಫ್ಟ್ ಮಾಡಲಾಗ್ತಿದೆ ಎಂದು ಕೇಂದ್ರ ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.
ನಾವು ಸರ್ಕಾರದ ಆದೇಶದಂತೆ ಕರ್ತವ್ಯ ನಿರ್ವಹಿಸುತ್ತೇವೆ: ಹೆಚ್ಡಿಕೆ ಆರೋಪಕ್ಕೆ ಅಲೋಕ್ ಮೋಹನ್ ಪ್ರತಿಕ್ರಿಯೆ
ಕಳೆದೆರಡು ದಿನಗಳ ಹಿಂದೆ ಪಾದರಾಯನಪುರ ಗಲಭೆಯ ಆರೋಪಿಗಳನ್ನು ಬಂಧಿಸಿದಾಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡೋದು ಬೇಡ, ರಾಮನಗರ ಜೈಲಿಗೆ ಸ್ಥಳಾಂತರಿಸಲು ಕೇಂದ್ರ ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ ಎಂಬ ಆರೋಪವನ್ನು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದರು. ಈ ಕುರಿತು ಅಲೋಕ್ ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದೆರಡು ದಿನಗಳ ಹಿಂದೆ ಆರೋಪಿಗಳನ್ನು ಬಂಧಿಸಿದಾಗ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡೋದು ಬೇಡ, ರಾಮನಗರ ಜೈಲಿಗೆ ಸ್ಥಳಾಂತರಿಸಲು ಕೇಂದ್ರ ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಲೋಕ್ ಮೋಹನ್, ಇಬ್ಬರಲ್ಲಿ ಸೋಂಕು ಪಾಸಿಟಿವ್ ಬಂದಿದೆ. ಕೆಲವರ ಬಗ್ಗೆ ನನಗೆ ಇನ್ನೂ ಮಾಹಿತಿ ಇಲ್ಲ. ನಾವು ಸರ್ಕಾರಿ ನೌಕರರು, ಸರ್ಕಾರದ ಆದೇಶದಂತೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಎಂದರು.
ಈಗಾಗಲೇ ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ 5 ಸಾವಿರಕ್ಕೂ ಅಧಿಕ ಕೈದಿಗಳಿದ್ದಾರೆ. ಪರಪ್ಪನ ಅಗ್ರಹಾರದ ಕೈದಿಗಳಿಗೆ ಸರಿಯಾದ ಜಾಗವಿಲ್ಲ. ಅವರ ಜೊತೆ ಪಾದರಾಯನಪುರದ ಆರೋಪಿಗಳನ್ನು ಹೇಗೆ ಇರಿಸೋದು. ಸದ್ಯಕ್ಕೆ ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ, ಇದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.