ಬೆಂಗಳೂರು:ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜಮೀರ್ ಆಪ್ತ ಅಲ್ತಾಫ್ ಖಾನ್ ಅವರು ಜಮೀರ್ ನಿವಾಸದ ಬಳಿ ದೌಡಾಯಿಸಿದ್ದಾರೆ.
ಇಡಿ ಅಧಿಕಾರಿಗಳ ದಾಳಿಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಲ್ತಾಫ್ ಖಾನ್, ಇಡಿ ದಾಳಿ ರಾಜಕೀಯ ಪ್ರೇರಿತವಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ಜಮೀರ್ ಐಎಂಎ ಮಾಲೀಕ ಮನ್ಸೂರ್ ಖಾನ್ಗೆ ನ್ಯಾಯಯುತವಾಗಿ ಆಸ್ತಿ ಮಾರಿದ್ದಾರೆ. ಹಣಕಾಸು ವ್ಯವಹಾರದಲ್ಲಿ ಯಾವುದೇ ಅಕ್ರಮ ಎಸಗಿಲ್ಲ. ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ನೂರಾರು ಅನಾಥ ಶವಗಳಿಗೆ ಮುಕ್ತಿ ಕಾಣಿಸಿದ್ದಾರೆ ಎಂದರು.