ಕರ್ನಾಟಕ

karnataka

ETV Bharat / city

ಖರ್ಗೆ ನಿವಾಸಕ್ಕೆ ಕುಷ್ಟಗಿ ಶಾಸಕ ಅಮರೇಗೌಡ ಭೇಟಿ: ರಾಜೀನಾಮೆ ವದಂತಿಗೆ ಹೇಳಿದ್ದೇನು? - amaregowda bhayyapura

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಸಮಸ್ಯೆಗಳನ್ನ ಬಗೆಹರಿಸಲು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಹೀಗಾಗಿ ಖರ್ಗೆಯವರು ನವದೆಹಲಿಯಿಂದ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಈ ಮಧ್ಯೆ ಕುಷ್ಟಗಿ ಶಾಸಕ ಅಮರೇಗೌಡ ಅವರು ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದಾರೆ.

amaregowda

By

Published : Jul 7, 2019, 11:42 AM IST

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆಯಿಂದ ಉಂಟಾಗಿರುವ ಸಮಸ್ಯೆಗಳನ್ನ ಬಗೆಹರಿಸಲು ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್​ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸದಾಶಿವನಗರ ಬಳಿ ಇರುವ ಮನೆಯಲ್ಲಿಯೇ ಇದ್ದಾರೆ. ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ಶಾಸಕರಾದ ಅಮರೇಗೌಡ ಭಯ್ಯಾಪೂರ ಮತ್ತು‌ ಶರಣಬಸಪ್ಪಗೌಡ ದರ್ಶನಾಪುರ ಅವರು ಬಿಜೆಪಿಯತ್ತ ಹೋಗುವ ಶಾಸಕ ಪಟ್ಟಿಯಲ್ಲಿ ಇದ್ದಾರೆ ಎನ್ನಲಾಗ್ತಿದೆ. ಹೀಗಾಗಿ ದರ್ಶನಾಪೂರ ಮತ್ತು ಭಯ್ಯಾಪೂರ ಜೊತೆ ಖರ್ಗೆ ಮಾತುಕತೆ ನಡೆಸುತ್ತಿದ್ದಾರೆ.

ರಾಜ್ಯ ರಾಜಕೀಯದ ಕುರಿತು ಮಾತನಾಡುತ್ತಿರುವ ಶಾಸಕ ಅಮರೇಗೌಡ ಭಯ್ಯಾಪೂರ

ಖರ್ಗೆ ನಿವಾಸದ ಎದುರು ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪೂರ ಮಾತನಾಡಿ, ನಾನು ಬಿಜೆಪಿಗೆ ಹೋಗಲ್ಲ, ಕಾಂಗ್ರೆಸ್ ನಲ್ಲೇ ಇರ್ತೀನಿ. ನಾನು ಹತ್ತು ಬಾರಿ ಯೋಚಿಸಿದ್ರು ಬಿಜೆಪಿ ಹೋಗುವ ಸಂಭವವಿಲ್ಲ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯಲ್ಲ. ನಾನು ಕಾಂಗ್ರೆಸ್ ಪಕ್ಷದ ಮುಖಂಡರ ಜೊತೆಗಿದ್ದೇನೆ. ಮುಖಂಡರು ಏನು ಹೇಳುತ್ತಾರೋ ಅದನ್ನೇ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details