ಬೆಂಗಳೂರು:ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳು ಇಂದಿಗೂ ಅತ್ಯಂತ ಪ್ರಸ್ತುತವಾಗಿವೆ. ಇನ್ನು 100 ವರ್ಷಗಳ ನಂತರವೂ ಬಾಬಾ ಸಾಹೇಬರ ವಿಚಾರಗಳು ದೇಶಕ್ಕೆ ಬೇಕಾಗಿವೆ. ಸ್ಕೂಲ್ ಬೆಲ್ ಬಾರಿಸುವ ವ್ಯಕ್ತಿಯನ್ನು ಅಂಬೇಡ್ಕರ್ ಅವರ ವಿರುದ್ಧ ಚುನಾವಣೆಗೆ ನಿಲ್ಲಿಸಿ ಎರಡು ಬಾರಿ ಸೋಲಿಸಿದ ಪಕ್ಷ ಕಾಂಗ್ರೆಸ್. ಅಂಬೇಡ್ಕರ್ರ ಬಗ್ಗೆ ಮಾತನಾಡಲು ಕಾಂಗ್ರೆಸ್‍ಗೆ ನೈತಿಕತೆಯೇ ಇಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕಿಸಿದರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಡಾಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅವರು ಅನುಭವಿಸಿದ ಶೋಷಣೆ, ಕಷ್ಟ, ಅವಮಾನವನ್ನು ಬೇರೆ ಯಾರು ಅನುಭವಿಸಿದ್ದಾರೋ ಇಲ್ಲವೋ ಗೊತ್ತಿಲ್ಲ. ನಮ್ಮ ಮಾತಿಗೆ ಗೌರವ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದು, ನಿಷ್ಕ್ರಿಯರಾಗುವುದನ್ನು ನಾವು ಕಾಣುತ್ತೇವೆ. ಆದರೆ, ಅಂಬೇಡ್ಕರ್ ಅದಕ್ಕೆ ವಿರುದ್ಧವಾಗಿದ್ದರು ಎಂದರು.