ಬೆಂಗಳೂರು:ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಹೆಣ್ಣೂರು ಮೂಲದ ಮಹಿಳೆಯೊಬ್ಬಳು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಳೆ.
ಬೆಂಗಳೂರಿನಲ್ಲಿ ಕೊರೊನಾಗೆ ಮಹಿಳೆ ಬಲಿ: ರಾಜ್ಯದಲ್ಲಿ 31ಕ್ಕೆ ಏರಿದ ಸೋಂಕಿತರ ಸಾವಿನ ಸಂಖ್ಯೆ
ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಸೋಂಕಿತರ ಒಟ್ಟು ಸಾವಿನ ಸಂಖ್ಯೆ ರಾಜ್ಯದಲ್ಲಿ 31ಕ್ಕೆ ಏರಿಕೆಯಾಗಿದೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಈ ಮಹಿಳೆಗೆ ಮೇ 6ರಿಂದ ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೇ 7ರಂದು ಮಹಿಳೆ ಮೃತಪಟ್ಟಿದ್ದಳು. ಉಸಿರಾಟದ ತೊಂದರೆ ಇದ್ದ ಕಾರಣದಿಂದ ಈಕೆಯ ಗಂಟಲು ದ್ರವವನ್ನು ಹೈದರಾಬಾದ್ಗೆ ಕಳುಹಿಸಲಾಗಿತ್ತು. ಇಂದು ಆಕೆಯಲ್ಲಿ ಕೊರೊನಾ ದೃಢಪಟ್ಟಿದೆ.
ಸೋಂಕಿತ ಮಹಿಳೆಯ ಸಾವಿನಿಂದಾಗಿ ಬೆಂಗಳೂರು ನಾರ್ಥ್ ಆಸ್ಪತ್ರೆಯನ್ನು ಸದ್ಯಕ್ಕೆ ಕ್ಲೋಸ್ ಮಾಡಲಾಗಿದೆ. ಈಕೆಗೆ ಚಿಕಿತ್ಸೆ ನೀಡಿದ್ದ ಆಸ್ಪತ್ರೆಯ 7 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. 15 ದಿನಗಳ ಕಾಲ ಆಸ್ಪತ್ರೆ ಬಂದ್ ಮಾಡುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಮಹಿಳೆಯ ಮೃತದೇಹವನ್ನು ಸಿ.ವಿ.ರಾಮನ್ ನಗರದ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇನ್ನೂ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಿಲ್ಲ.