ಬೆಂಗಳೂರು: ಸಾಧ್ಯವಾದರೇ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ (Anti-religious conversion bill) ಮಂಡನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ (Karnataka Anti-religious conversion bill) ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಬೇರೆ ಬೇರೆ ರಾಜ್ಯಗಳ ಕಾಯ್ದೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಧಾರ್ಮಿಕ ಮುಖಂಡರ ಜತೆಗೂ ಚರ್ಚೆ ಮಾಡಿ ಒಂದು ಒಳ್ಳೆಯ ಕಾಯ್ದೆಯನ್ನು ತರುವ ಉದ್ದೇಶ ಇದೆ ಎಂದರು.
ಇದರಲ್ಲಿ ಯಾವುದೇ ರೀತಿಯ ಪೂರ್ವಾಗ್ರಹ ಇಲ್ಲ. ಅವರವರ ಧರ್ಮದಲ್ಲಿ ಎಲ್ಲರೂ ಶಾಂತಿಯುತವಾಗಿ ಬದುಕಬೇಕು. ಎಲ್ಲರಿಗೂ ಸರ್ಕಾರದ ರಕ್ಷಣೆ ಇದೆ. ಆದರೆ, ಇನ್ನೊಂದು ಧರ್ಮದವರನ್ನು ಮತ ಪರಿವರ್ತನೆ ಮಾಡಿ ತಮ್ಮ ಸಂಖ್ಯೆ ಹೆಚ್ಚಳ ಮಾಡುವುದು ಹಾಗೂ ಈ ದೇಶದ ವಿರುದ್ಧ ಎತ್ತಿ ಕಟ್ಟುವುದು ಹಾಗೂ ಈ ನೆಲದ ಕಾನೂನು ಅನ್ವಯವಾಗಲ್ಲ ಎನ್ನುತ್ತಾರಲ್ಲಾ ಈ ವ್ಯವಸ್ಥೆ ವಿರುದ್ಧ ಸರ್ಕಾರ ಕಾಯ್ದೆ ತರುತ್ತದೆ ಎಂದು ಸ್ಪಷ್ಟಪಡಿಸಿದರು.
ಕಾಯ್ದೆ ತರುವಾಗ ಚರ್ಚೆ ಮಾಡುತ್ತೇವೆ. ಸಾಧ್ಯವಾದರೆ ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡುತ್ತೇವೆ. ಇಲ್ಲವಾದರೆ ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ:ನಿರಂತರ ಮಳೆ, ಹವಾಮಾನ ವೈಪರೀತ್ಯ.. ರಾಜ್ಯದಲ್ಲಿ ಡೆಂಗ್ಯೂ, ಚಿಕುನ್ ಗುನ್ಯಾ ಹಾವಳಿಗೆ ಜನ ತತ್ತರ